Connect with us

  DAKSHINA KANNADA

  ಅಜಲು ಪದ್ಧತಿ ನಿಷೇಧ ತಪ್ಪಿದಲ್ಲಿ ಕಠಿಣ ಕಾರಾಗೃಹ ಶಿಕ್ಷೆ

  ಮಂಗಳೂರು,ಆಗಸ್ಟ್ 29 : ದ.ಕ.ಜಿಲ್ಲೆಯಲ್ಲಿರುವ ಆದಿವಾಸಿ ಪಂಗಡಕ್ಕೆ ಸೇರಿದ ಕೊರಗ ಜನಾಂಗದವರ ಸಮಾಜದಲ್ಲಿ ಆಚರಣೆಯಲ್ಲಿರುವ ಅಜಲು ಪದ್ದತಿಯನ್ನು ನಿಷೇದಿಸಲು ಕರ್ನಾಟಕ ಸರಕಾರ ಕೊರಗರ (ಅಜಲು ಪದ್ದತಿ ನಿಷೇಧ)ಅದ್ಯಾದೇಶವನ್ನು ಕರ್ನಾಟಕ ಸರಕಾರದ ಸಚಿವಾಲಯ ಅಧಿಸೂಚನೆ ಜಾರಿಗೊಳಿಸಿದೆ.
  ದಸರಾ ಆಚರಣೆಯ ಸಮಯದಲ್ಲಿ ಬೇರೆ ಜಾತಿಯ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ ಮನೆಗಳ ಮುಂದೆ ಕುಣಿದು ಜಾತಿ ನಿಂದನೆ ಮಾಡುವುದು ಮತ್ತು ಅಮವಾಸ್ಯೆ ದಿನಗಳಲ್ಲಿ ಕೊರಗ ಜನಾಂಗದವರ ಹೆಂಗಸರಿಗೆ ಉಗುರು ತಲೆಕೂದಲುಗಳನ್ನು ಊಟದಲ್ಲಿ ಹಾಕಿ ಉಣಲು ನೀಡುವುದು , ಬೇರೆ ಜನಾಂಗದವರ ಚಿಕ್ಕ ಮಕ್ಕಳಿಗೆ ಕಾಯಿಲೆ ಇದ್ದಾಗ ಕೊರಗ ಜನಾಂಗದ ಮಹಿಳೆಯನ್ನು ಕರೆದು ಆ ಮಗುವಿಗೆ ಹಾಲು ಉಣಿಸಲು ಬಳಸಿಕೊಂಡು ಮಗುವಿನ ಕಾಯಿಲೆಯನ್ನು ಕೊರಗ ಜನಾಂಗದವರಿಗೆ ಹರಡುವಂತೆ ಮಾಡುವುದು. ದ.ಕ.ಜಿಲ್ಲೆಯ ಜಾನಪದ ಕ್ರೀಡೆಯಾದ ಕಂಬಳದಲ್ಲಿ ಕಂಬಳದ ಹಿಂದಿನ ದಿನ ಕಂಬಳದ ಕೆರೆಯಲ್ಲಿ ಕುಪ್ಪಿಚೂರು, ಮುಳ್ಳು ಮುಂತಾದವುಗಳು ಇರುವ ಬಗ್ಗೆ ಕಂಬಳದ ಹಿಂದಿನ ದಿನ ಕಂಬಳದ ಕೆರೆಯಲ್ಲಿ ಕೊರಗ ಜನಾಂಗದವರನ್ನು ಬಳಸಿಕೊಳ್ಳುವುದು, ಜಾತ್ರೆ, ಕಂಬಳ ಮತ್ತು ಇನ್ನಿತರ ಸಾರ್ವಜನಿಕ ಸಮಾರಂಭಗಳಲ್ಲಿ ಕೊರಗ ಜನಾಂಗದವರನ್ನು ಡೋಲು ಬಡಿಸಿ ಕುಣಿತಕ್ಕೆ ಬಳಸಿಕೊಳ್ಳುವುದು ಮತ್ತು ಬೇರೆ ಜನಾಂಗದವರ ಹೆಂಗಸರಿಗೆ ಸೀಮಂತದ ದಿನ ಹೆಂಗಸಿನ ಸೀಮಂತದ ಎಂಜಲು ಊಟವನ್ನು ಕೊರಗ ಜನಾಂಗದ ಮಹಿಳೆಯನ್ನು ಕರೆದು ಎಂಜಲು ಊಟ ಮಾಡಿ ಸೀಮಂತಳ ಮೇಲಿರುವ ದೃಷ್ಟಿಯನ್ನು ತೆಗೆಯಲು ಬಳಸಿಕೊಳ್ಳುವುದು ಕೊರಗರ ಅಜಲು ಪದ್ದತಿ ನಿಷೇಧ ಕಾಯ್ದೆಯಡಿ ಬರುವುದರಿಂದ ಇಂತಹ ಆಚರಣೆಗಳು ಕಂಡು ಬಂದಲ್ಲಿ ಅಂತಹ ಪ್ರಕರಣಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ನಿಷೇಧ ಅಧಿನಿಯಮ 1989 ರ ಅಡಿಯಲ್ಲಿ ನೊಂದಾಯಿಸಿ ಕಾನೂನು ಕ್ರಮ ಜರುಗಿಸಲಾಗುವುದು. ಅಲ್ಲದೆ 5 ರಿಂದ 6 ವರ್ಷಗಳವರೆಗೆ ಕಾರಾಗೃಹವಾಸ ಮತ್ತು ರೂ.5000 ದಂಡ ವಿಧಿಸಲಾಗುವುದು. ಆದ ಕಾರಣ ಮುಂಬರುವ ದಸರಾ ಹಬ್ಬಗಳ ಸಮಯದಲ್ಲಿ ಇಂತಹ ಪ್ರಸಂಗಗಳು ಕಂಡು ಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಗೆ ಕೂಡಲೇ ವಿಷಯ ತಿಳಿಸಲು ಸಾರ್ವಜನಿಕರಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕರು ಮನವಿ ಮಾಡಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply