Connect with us

UDUPI

ಅರಸು ಕರ್ನಾಟಕದ ಜನತೆಯ ಮನದಲ್ಲಿ ಅಜರಾಮರ -ಪ್ರಮೋದ್ ಮಧ್ವರಾಜ್

Share Information

ಉಡುಪಿ, ಆಗಸ್ಟ್ 20 : ರಾಜ್ಯ ಕಂಡ ಅಪ್ರತಿಮ ರಾಜಕಾರಣಿ ಹಾಗೂ ಜನಸಾಮಾನ್ಯರ ಮನದಲ್ಲಿ ಚಿರಸ್ಥಾಯಿಯಾಗಿ ಉಳಿದ ಮಹಾನ್ ಮುಖ್ಯಮಂತ್ರಿ ದೇವರಾಜ್ ಅರಸ್ ಅವರು ಮೀನುಗಾರಿಕೆ, ಯುವಜನಸಬಲೀಕರಣ ಹಾಗೂ ಕ್ರೀಡಾ ಸಚಿವರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಮೋದ್ ಮಧ್ವರಾಜ್ ಹೇಳಿದರು.

ಅವರಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಹಿಂದುಳಿದ ವರ್ಗಗಳ ಧೀಮಂತ ನಾಯಕ. ಪರಿವರ್ತನೆಯ ಹರಿಕಾರ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ದಿ.ಶ್ರೀ.ಡಿ ದೇವರಾಜ ಅರಸುರವರ 102ನೇ ಜನ್ಮ ದಿನಾಚರಣೆಯಲ್ಲಿ ಮಾತನಾಡುತ್ತಿದ್ದರು. ಮುಂದುವರಿದ ಸಮುದಾಯದಲ್ಲಿದ್ದುಕೊಂಡು ಹಿಂದುಳಿದವರ ಬದುಕು ಕಟ್ಟಲು ಶಾಶ್ವತ ಅಡಿಪಾಯ ಹಾಕಿದ ಅರಸು ಅವರು ದುಡಿಯುವವನೇ ಹೊಲದೊಡೆಯ ಕಾನೂನನ್ನು ಅನುಷ್ಠಾನಕ್ಕೆ ತಂದು ಎಲ್ಲರ ಮನದಲ್ಲಿ ಅಜರಾಮರರಾದರು.

ಇಂದು ತನ್ನ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರ ನೀಡಿದ ಬಜೆಟ್ 2,000 ಕೋಟಿ. ಅಂದು ರಾಜ್ಯದ ಬಜೆಟ್ ಇದ್ದುದು 1000 ಕೋಟಿ. ಅಂತಹ ಕಷ್ಟದ ಸಮಯದಲ್ಲೂ ಹಿಂದುಳಿದವರ ಬಗ್ಗೆ ಚಿಂತಿಸಿ ಕಾನೂನು ಯಥಾವತ್ತಾಗಿ ಅನುಷ್ಠಾನಕ್ಕೆ ತಂದ ಕೀರ್ತಿ ದೇವರಾಜು ಅರಸು ಅವರದ್ದು ಎಂದರು. ಅವರು ಮುಖ್ಯಮಂತ್ರಿಯಾಗಿದ್ದ ತನ್ನ ಅಮ್ಮ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾಗಿದ್ದುದು, ಅರಸ್ ಅವರು ಮೀನುಗಾರಿಕಾ ಮಂತ್ರಿಯಾಗಿದ್ದಾಗ ಮಲ್ಪೆಗೆ ಭೇಟಿ ನೀಡಿದ ಸಂದರ್ಭವನ್ನು ಅವರು ಜ್ಞಾಪಿಸಿಕೊಂಡರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ ಅವರು, ಅವಿರತ ಶ್ರಮದಿಂದ ಅತ್ಯುತ್ತಮ ಆಡಳಿತ ನೀಡಿದ ಅರಸು ಅವರು ಎಲ್ಲರಿಗೂ ಮಾದರಿ ಎಂದರು. ಕರ್ತವ್ಯ ನಿಷ್ಠೆ ಅವರನ್ನು ಬಹು ಎತ್ತರಕ್ಕೆ ಏರಿಸಿದ್ದು, ಇಂದಿನ ವಿದ್ಯಾರ್ಥಿಗಳು ಸರ್ಕಾರದ ಸವಲತ್ತುಗಳನ್ನು ಉಪಯೋಗಿಸಿ ಉತ್ತಮರಾಗಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಸಿ, ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ತಾಲೂಕು ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಹರೀಶ್ ಗಾಂವಕರ್, ಎಚ್‍ಡಿಎಫ್‍ಸಿ ಬ್ಯಾಂಕಿನ ಮ್ಯಾನೇಜರ್ ಕೃಷ್ಣ ಪ್ರಸಾದ್ ಉಪಸ್ಥಿತರಿದ್ದರು.

ಜಿಲ್ಲೆಯ ಹಾಸ್ಟೆಲ್‍ಗಳಲ್ಲಿದ್ದುಕೊಂಡು ಎಸ್ ಎಸ್ ಎಲ್ ಸಿ, ಪಿಯುಸಿಯಲ್ಲಿ, ಪದವಿಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದವರಿಗೆ ಬಹುಮಾನವನ್ನು ಬ್ಯಾಂಕ್‍ನವರು ಪ್ರಾಯೋಜಿಸಿದ್ದರು. ಹತ್ತು ವಿದ್ಯಾರ್ಥಿಗಳ ತಂಡದಿಂದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಅರಸು ಅವರ ವ್ಯಕ್ತಿತ್ವ ಮತ್ತು ಸಾಧನೆ ಕುರಿತು ಮುಲ್ಕಿ ಸುಂದರ್‍ರಾಮ್ ಶೆಟ್ಟಿ ಕಾಲೇಜು ಶಿರ್ವದ ನಿವೃತ್ತ ಪ್ರಾಂಶುಪಾಲ ಪ್ರೊ. ವೈ ಭಾಸ್ಕರ ಶೆಟ್ಟಿ ಅವರು ಉಪನ್ಯಾಸ ನೀಡಿದರು.


Share Information
Advertisement
Click to comment

You must be logged in to post a comment Login

Leave a Reply