Connect with us

DAKSHINA KANNADA

ಆರ್.ಎಸ್.ಎಸ್ ಕಾರ್ಯಕರ್ತ ಶರತ್ ಹತ್ಯೆ ಆರೋಪಿಗಳ ಶೀಘ್ರ ಬಂಧನವಾಗಲಿ, ಸಚಿವ ರೈ ಪ್ರಾರ್ಥನೆ.

ಮಂಗಳೂರು,ಜುಲೈ 21: ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯಾ ಆರೋಪಿಗಳ ಶೀಘ್ರವೇ ಬಂಧನವಾಗಲಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮನಾಥ ರೈ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಮತ್ತು ಪೂಜೆ ಸಲ್ಲಿಸಿದರು.ಬಂಟ್ವಾಳ ತಾಲೂಕಿನ ಬಿ ಸಿ ರೋಡಿನಲ್ಲಿ ಉದಯ ಲಾಂಡ್ರಿಯ ಮಾಲಕ ಶರತ್ ಮಡಿವಾಳ ಹತ್ಯೆಯಾಗಿ ಇಂದಿಗೆ ಹದಿನೈದು ದಿನಗಳಾಗಿವೆ,ಆದರೆ ಇನ್ನೂ ಕೂಡ ಆರೋಪಿಗಳ ಬಂಧನವಾಗಿಲ್ಲ .ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿತ್ತು,ಅಲ್ಲದೆ ಶರತ್ ಸಾವಿನ ಕುರಿತಂತೆ ಸಾಮಾಜಿಕ ಜಾಲ ತಾಣಗಳಲ್ಲಿ ಸಾಕಷ್ಟು ಊಹಾಪೋಹ ಕೂಡ ಹಬ್ಬಿವೆ,ಈ ಮಧ್ಯೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈಯವರು ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ತೆರಳಿ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಆರೋಪಿಗಳ ಶೀಘ್ರವೇ ಬಂಧನವಾಗಲಿ ಎಂದು ದೇವರಿಗೆ ವಿಶೇಷ ಪ್ರಾರ್ಥನೆ ಹಾಗೂ ಪೂಜೆ ಸಲ್ಲಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಮಾನಾಥ ರೈ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯಾ ಆರೋಪಿಗಳ ಶೀಘ್ರವೇ ಬಂಧನವಾಗಬೇಕು ಅವರಿಗೆ ಕಠಿಣ ಶಿಕ್ಷೆಯಾಗಬೇಕು ಇದರ ಹಿಂದೆ ಇರುವ ಪಿತೂರಿದಾರರ ಬಂಧನವಾಗಬೇಕು,ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರಿಗೆ ದೇವರು ಸದ್ಬುದ್ದಿ ಕೊಡಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಶ್ವತ ಶಾಂತಿ ನೆಲೆಸಲಿ ಎಂದು ಪ್ರಾರ್ಥಿಸಿದರು.

Facebook Comments

comments