ಮಂಗಳೂರು,ಅಗಸ್ಟ್    ಯಾವುದೇ ಕಾರ್ಯಕ್ರಮವನ್ನು ಅತ್ಯಂತ ವಿಭಿನ್ನವಾಗಿ ಆಚರಿಸುವ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ 71 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಪುತ್ತಿಗೆಯಲ್ಲಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಸೇರಿದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸೇರಿದಂತೆ ಸುಮಾರು 40 ಸಾವಿರದಷ್ಟು ಜನ ಈ ಆಚರಣೆಯಲ್ಲಿ ಪಾಲ್ಗೊಂಡಿದ್ದರು.ಆರು ಎಕರೆ ಭೂ ಪ್ರದೇಶದಲ್ಲಿ ಅಚ್ಚುಕಟ್ಟಾಗಿ ಸೇರಿದ ವಿದ್ಯಾರ್ಥಿಗಳಿಂದಾಗಿ ಇಡೀ ಪರಿಸರವೇ ತ್ರಿವರ್ಣಮಯವಾಗಿತ್ತು.

 ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವಾ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

0 Shares

Facebook Comments

comments