Connect with us

UDUPI

ಉಡುಪಿ ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರ 25ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಯಿಂದ ಬೆಂಬಲ

ಉಡುಪಿ ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರ 25ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಯಿಂದ ಬೆಂಬಲ

ಉಡುಪಿ ಅಕ್ಟೋಬರ್ 3: ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ 25ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಯಿಂದ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ. ವೈದ್ಯರ ಸೇವೆ ಸ್ಥಗಿತಗೊಳಿಸಿರುವ 700 ಕ್ಕೂ ಅಧಿಕ ಅಲೋಪತಿ, ಆಯುರ್ವೇದ, ಹೋಮಿಯೋಪತಿ ವೈದ್ಯರ ಭಾಗಿಯಾಗಿದ್ದಾರೆ.

ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯಲ್ಲಿ ತುರ್ತುಚಿಕಿತ್ಸೆಗೆ ಅವಕಾಶ ನೀಡಲಾಗಿದ್ದು, ಹೊರರೋಗಿಗಳ ವಿಭಾಗ ಬಂದ್ ಮಾಡಲಾಗಿದೆ.ಆದರೆ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಎಂದಿನಂತೆ ಚಿಕಿತ್ಸೆ ಲಭ್ಯವಾಗಿದ್ದು, ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ವೈದ್ಯರಿಗೆ ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ ನೀಡಲಾಗಿದೆ.

61 ಪ್ರಾಥಮಿಕ ಆರೋಗ್ಯ ಕೇಂದ್ರ, 7 ಸಮುದಾಯ ಆರೋಗ್ಯ ಕೇಂದ್ರ, 2 ತಾಲೂಕು ಆಸ್ಪತ್ರೆ, 1 ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.

Facebook Comments

comments