ಉಡುಪಿ, ಆಗಸ್ಟ್ 20 : ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಲಾದ ಲಾರಿಗೆ ಹಿಂಬದಿಯಿಂದ ಮೀನು ಸಾಗಾಟದ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಸಾವನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಪಡುಬಿದ್ರಿ ಠಾಣಾ ವ್ಯಾಪ್ತಿಯ ಎರ್ಮಾಳು ಬುದಗಿ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ. ಮಂಗಳೂರು ಹಳೇ ಬಂದರಿನಿಂದ  ಉಡುಪಿಯತ್ತ ಮೀನು ಹೇರಿಕೊಂಡು ಸಾಗುತ್ತಿದ್ದ ಈಚರ್ ಟೆಂಪೋ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿಹೊಡೆದ ಪರಿಣಾಮ ಮುಂಭಾಗದಲ್ಲಿದ್ದ ಮತ್ತೊಂದು ಲಾರಿಯ ಪಕ್ಕದಲ್ಲಿ ನಿಂತಿದ್ದ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಲಾರಿಯೊಳಗಿದ್ದ ಇಬ್ಬರು ಹಾಗು ಟೆಂಪೋ ಚಾಲಕ ಗಂಭೀರ ಗಾಯಗೊಂಡಿದ್ದಾನೆ. ಗಾಯಾಳುಗಳನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದ್ದಾರೆ. ಘಟನೆಯಿಂದಾಗಿ ಹದ್ದಾರಿಯಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದ್ದು ಟೆಂಪೋದಲ್ಲಿದ್ದ ಮೀನು ರಸ್ತೆಯುದ್ದಕ್ಕೂ ಚೆಲ್ಲಿದೆ.ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Facebook Comments

comments