UDUPI
ಎಸ್.ಸಿ.ಪಿ/ಟಿ.ಎಸ್.ಪಿ ಅನುದಾನ ಡಿಸೆಂಬರ್ ಒಳಗೆ ವೆಚ್ಚ ಮಾಡಿ- ಜಿಲ್ಲಾಧಿಕಾರಿ
ಎಸ್.ಸಿ.ಪಿ/ಟಿ.ಎಸ್.ಪಿ ಅನುದಾನ ಡಿಸೆಂಬರ್ ಒಳಗೆ ವೆಚ್ಚ ಮಾಡಿ- ಜಿಲ್ಲಾಧಿಕಾರಿ
ಉಡುಪಿ, ಸೆಪ್ಟೆಂಬರ್ 20: ಜಿಲ್ಲೆಯ ಎಲ್ಲಾ ಇಲಾಖೆಗಳು ತಮ್ಮ ಇಲಾಖೆಗಳಿಗೆ ಬಿಡುಗಡೆ ಮಾಡಿರುವ ಎಸ್.ಟಿ.ಪಿ / ಟಿ.ಎಸ್.ಪಿ ಕಾರ್ಯಕ್ರಮಗಳ ಅನುದಾನವನ್ನು ಡಿಸೆಂಬರ್ -17 ರ ಒಳಗೆ ಸಂಪೂರ್ಣವಾಗಿ ವೆಚ್ಚ ಮಾಡುವಂತೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಗಳ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಲ್ಲಾ ಇಲಾಖೆಗಳು ಅಕ್ಟೋಬರ್ 15 ರ ಒಳಗೆ ಫಲಾನುಭವಿಗಳನ್ನು ಆಯ್ಕೆ ಮಾಡಿ, ಡಿಸೆಂಬರ್ ಅಂತ್ಯದ ವೇಳೆಗೆ ತಮಗೆ ನೀಡಿರುವ ಅನುದಾನವನ್ನು ಸಂಪೂರ್ಣವಾಗಿ ವೆಚ್ಚ ಮಾಡುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಪ,ಜಾತಿ ಮತ್ತು ಪಂಗಡದ ಕಾಲೋನಿಗಳಿಗೆ ಭೇಟಿ ನೀಡಿ ಅಲ್ಲಿಗೆ ಅವಶ್ಯಕವಾಗಿ ಕೈಗೊಳ್ಳಬೇಕಾದ ಕಾಮಗಾರಿಯ ಪಟ್ಟಿಯನ್ನು ಸಂಬಂದಪಟ್ಟ ಇಲಾಖೆಗಳಿಗೆ ನೀಡುವಂತೆ ಸಮಾಜ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.
ಕಾಮಗಾರಿಗಳನ್ನು ಆಯ್ಕೆ ಮಾಡುವಾಗ ಕುಡಿಯುವ ನೀರು, ವಿದ್ಯುತ್ ಸಂಪರ್ಕ ಹಾಗೂ ವಸತಿ ಸೌಕರ್ಯಗಳಿಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.
You must be logged in to post a comment Login