ಸುಳ್ಯ,ಜುಲೈ.19:ಕಳೆದ 2 ದಿನಗಳಿಂದ ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ದಕ್ಷಿಣಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮಳೆಯಿಂದಾಗಿ ಜನ ಜೀವನ ಕೊಂಚ ಅಸ್ತವ್ಯಸ್ತಗೊಂಡಿದೆ.

ಕುಕ್ಕೆ ಸುಬ್ರಮಣ್ಯ ಸಮೀಪ ಕುಮಾರಧಾರಾ ಹಳೆ ಸೇತುವೆ ಮಳೆ ನೀರಿನಿಂದಾಗಿ ಸಂಪೂರ್ಣ ಮುಳುಗಡೆಯಾಗಿದ್ದು, ಕುಮಾರಧಾರಾ ಸ್ನಾನಘಟ್ಟವೂ ಜಲಾವೃತವಾಗಿದೆ. ಅಲ್ಲದೆ ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ಜೀವನದಿಗಳಾದ ನೇತ್ರವಾತಿ ಹಾಗೂ ಕುಮಾರಧಾರಾ ನದಿಗಳಲ್ಲೂ ನೀರಿನ ಹರಿವು ಹೆಚ್ಚಾಗಿದ್ದು, ಮಳೆ ಹೀಗೇ ಮುಂದುವರಿದಲ್ಲಿ ನದಿ ಪಾತ್ರಗಳಲ್ಲಿ ನೆರೆಯ ಪರಿಸ್ಥಿತಿಯೂ ನಿರ್ಮಾಣವಾಗುವ ಸಾಧ್ಯತೆಯಿದೆ.

ಮುಂದಿನ ಎರಡು ದಿನಗಳ ಕಾಲವೂ ಮಳೆಯು ಇದೇ ರೀತಿಯಲ್ಲಿ ಮುಂದುವರಿಯಲಿದೆ ಎನ್ನುವ ಸೂಚನೆಯನ್ನೂ ಹವಾಮಾನ ಇಲಾಖೆ ನೀಡಿದೆ.

ವಿಡಿಯೋ ನೋಡಲು ಈ ಕೆಳಗಿನ ಲಿಂಕನ್ನು ಒತ್ತಿರಿ..