ಮಂಗಳೂರು,ಜುಲೈ.20 : ರಸ್ತೆ ದಾಟುತ್ತಿದ್ದ ಗರ್ಭಿಣಿ ಮಹಿಳೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ ದುರ್ಘಟನೆ ಮಂಗಳೂರಿನ ಉಳ್ಳಾಲದ ಸಂಕೊಳಿಕೆಯಲ್ಲಿ ಸಂಭವಿಸಿದೆ. ಮೃತಪಟ್ಟ ಮಹಿಳೆಯನ್ನು ಅಪ್ಸಾ (30) ಎಂದು ಗುರುತ್ತಿಸಲಾಗಿದೆ.ಮದುವೆ ಸಮಾರಂಭ ಮುಗಿಸಿ ವಾಪಾಸಾಗುತ್ತಿದ್ದ  ಅಪ್ಸಾ ವೇಳೆ ಅತೀ ವೇಗದಿಂದ ಬಂದ ಕಾರು ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಉಳ್ಳಾಲ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Facebook Comments

comments