ಮಂಗಳೂರು : ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾ ನಿಗೂಢ ಸಾವಿನ ಹಿನ್ನೆಲೆಯಲ್ಲಿ ಮಕ್ಕಳ ಮತ್ತು ಮಹಿಳಾ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಆಳ್ವಾಸ್ ವಿದ್ಯಾಸಂಸ್ಥೆಗೆ ಭೇಟಿ ನೀಡಿದ್ದಾರೆ. ಹಾಸ್ಟೆಲ್ ಮತ್ತು ಹೈಸ್ಕೂಲಿಗೆ ಭೇಟಿ ನೀಡಿದ ತಂಡ, ಅಲ್ಲಿನ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರನ್ನು ಪ್ರಶ್ನೆ ಮಾಡಿದೆ. ಬಳಿಕ ರೆಸಿಡೆನ್ಶಿಯಲ್ ಸ್ಕೂಲ್ ಬಗ್ಗೆ ಶಿಕ್ಷಣ ಅಧಿಕಾರಿಗಳು ಮತ್ತು ಆಳ್ವಾಸ್ ಆಡಳಿತ ಮಂಡಳಿಯನ್ನು ಪ್ರಶ್ನಿಸಿ, ತೀವ್ರ ತರಾಟೆಗೆತ್ತಿಕೊಂಡಿದೆ. ವಸತಿ ಶಾಲೆ ನಡೆಸುವುದಕ್ಕೆ ಖಾಸಗಿಯವರಿಗೆ ಅನುಮತಿ ಇಲ್ಲ. ಹೀಗಾಗಿ ಈ ಬಗ್ಗೆ ಅಧಿಕಾರಿಗಳಿಂದ ವರದಿ ಕೇಳಿದ್ದೇನೆ ಎಂದು ವಿ.ಎಸ್.ಉಗ್ರಪ್ಪ ತಿಳಿಸಿದ್ದಾರೆ. ಅಲ್ಲದೆ, ಕಾವ್ಯಾಳನ್ನು ಹಾಸ್ಟೆಲಿನಿಂದ ಹೊರಗೆ ಕೊಂಡೊಯ್ದಿದ್ದ ವಿದ್ಯಾರ್ಥಿನಿಯರನ್ನು ಉಗ್ರಪ್ಪ ಪ್ರಶ್ನಿಸಿದ್ದು ಸಿಬಂದಿ ಮತ್ತು ಆಡಳಿತ ಮಂಡಳಿ ತಬ್ಬಿಬ್ಬಾಗಿದೆ.

Facebook Comments

comments