ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರು ತಿಂಗಳಹಿಂದೆ ನಡೆದ ಮನೆ ಕಳವು ಪ್ರಕರಣದ ಆರೋಪಿ ದಂಡದೊಂದಿಗೆ ಒಂದೂವರೆ ವರ್ಷ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿದ್ದಾನೆ.
ಉಡುಪಿ : ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರು ತಿಂಗಳ ಹಿಂದೆ ನಡೆದ ಮನೆ ಕಳವು ಪ್ರಕರಣದ ಆರೋಪಿ ದಂಡದೊಂದಿಗೆ ಒಂದೂವರೆ ವರ್ಷ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿದ್ದಾನೆ.

ಕಾರ್ಕಳ ಮೂಲದ ಉಮಾನಾಥ ಪ್ರಭು (59) ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ.
ಪ್ರಸ್ತುತ ಆತ ನ್ಯಾಯಾಂಗ ಬಂಧನದಲ್ಲಿರುವ ಉಮಾನಾಥ ಪ್ರಭು ಮೇಲಿನ ದೋಷಾರೋಪಣೆಗಳು ಸಾಬೀತಾಗಿದ್ದು, ಆತ ಅಪರಾಧಿಯೆಂದು ಕುಂದಾಪುರದ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಟಿ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುಳಾ ಬಿ. ತೀರ್ಪು ಪ್ರಕಟಿಸಿದ್ದಾರೆ.
ಆರೋಪಿಯು ರೂಢಿಗತವಾಗಿ ಕಳ್ಳತನ ಪ್ರಕರಣದಲ್ಲಿ ತೊಡಗಿಸಿಕೊಂಡಿದ್ದು, ಆತನಿಗೆ ಬಿ.ಎನ್.ಎಸ್ ಕಾಯ್ದೆಯಡಿ ಗರಿಷ್ಠ ಶಿಕ್ಷೆ ವಿಧಿಸಬೇಕೆಂದು ಸಹಾಯಕ ಸರಕಾರಿ ಅಭಿಯೋಜಕಉದಯ್ ಕುಮಾರ್ ವಾದ ಮಂಡಿಸಿ ಮನವಿ ಮಾಡಿದ್ದರು.
ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ಒಟ್ಟು 20 ಸಾಕ್ಷಿಗಳ ವಿಚಾರಣೆ ನಡೆಸಲಾಗಿತ್ತು. ಕಾನೂನು ಸುವ್ಯವಸ್ಥೆ ಪಿಎಸ್‌ಐ ವಿನಯ್ ಎಂ. ಕೊರ್ಲಹಳ್ಳಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.



