Connect with us

LATEST NEWS

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಗೆ ಚಾಲನೆ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಗೆ ಚಾಲನೆ

ಸುಳ್ಯ ನವೆಂಬರ್ 10: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದ ಎಲ್ಲಾ 224 ವಿಧಾನ ಸಭಾ ಕ್ಷೇತ್ರಗಳಲ್ಲಿ ಹಮ್ಮಿಕೊಳ್ಳಲಾಗಿರುವ ನವಕರ್ನಾಟಕ ನಿರ್ಮಣಕ್ಕಾಗಿ ಪರಿವರ್ತನಾ ಯಾತ್ರೆಗೆ ಕುಕ್ಕೆ ಸುಬ್ರಹ್ಮಣ್ಯ ವಿಧ್ಯುಕ್ತ ಚಾಲನೆ ನೀಡಲಾಗಿದೆ. ಪರಿವರ್ತನಾ ರಥಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು.

ಸುಳ್ಯದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಪರಿವರ್ತನಾ ಯಾತ್ರೆ ಸಭೆ ನಡಯಲಿದ್ದು ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ಮುಖಂಡರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಂತರ ಇಂದು ಸಂಜೆ 4 ಗಂಟೆಗೆ ಪುತ್ತೂರಿನಲ್ಲಿ ಹಾಗೂ 6 ಗಂಟೆಗೆ ಬೆಳ್ತಂಗಡಿಯಲ್ಲಿ ಪರಿವರ್ತನಾ ಸಭೆ ನಡೆಯಲಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿದ್ದಾರೆ. ದೇವರ ದರ್ಶನ ಪಡೆದ ಯಡಿಯೂರಪ್ಪ ಪರಿವರ್ತನಾ ಯಾತ್ರೆ ರಥದೊಂದಿಗೆ ಸುಳ್ಯದ ಕಡೆಗೆ ಹೊರಟ ಬಿಜೆಪಿ ತಂಡ.

Facebook Comments

comments