ಮಂಗಳೂರು,ಅಗಸ್ಟ್ 10:  ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಆರು ಲಾರಿಗಳನ್ನು ಪೋಲೀಸರು ವಶಕ್ಕೆ ಪಡೆದಿದ್ದು, ಅಕ್ರಮ ಸಾಗಾಟದಲ್ಲಿ ತೊಡಗಿದ್ದ ಆರು ಜನರನ್ನು ಬಂಧಿಸಿದ್ದಾರೆ. ಮಂಗಳೂರು ಹೊರವಲಯದ ಉಳ್ಳಾಲ ಪೋಲೀಸ್ ಠಾಣಾ ವ್ಯಾಪ್ತಿಯ ತಚ್ಚಣಿ ಎಂಬಲ್ಲಿ ಮಂಗಳೂರು ಪೋಲೀಸರು ಈ ಕಾರ್ಯಾಚರಣೆಯನ್ನು ನಡೆಸಿದ್ದಾರೆ.

ಅಡ್ಯಾರು, ಜಪ್ಪಿನಮೊಗರು ಸೇರಿದಂತೆ ಹಲವು ಕಡೆಗಳಲ್ಲಿ ಅಕ್ರಮ ಮರಳುಗಾರಿಗೆ ನಿರಂತರವಾಗಿ ನಡೆಯುತ್ತಿದ್ದು, ಇಲ್ಲಿ ಸಂಗ್ರಹಿಸಿದ ಮರಳನ್ನು ಅಕ್ರಮವಾಗಿ ಕೇರಳಕ್ಕೆ ಸಾಗಿಸುವ ದಂಧೆ ನಿರಂತರವಾಗಿ ನಡೆಯುತ್ತಿದ್ದು, ಇಂದು ಮಂಗಳೂರು ಎಸಿಪಿ ರಾಮ್ ರಾವ್ ನೇತೃತ್ವದ ತಂಡ ಆರು ಲಾರಿಗಳನ್ನು ವಶಕ್ಕೆ ಪಡೆಯುವ ಮೂಲಕ ರಾಜಾರೋಷವಾಗಿ ನಡೆಯುತ್ತಿದ್ದ ಅಕ್ರಮಕ್ಕೆ ಕಡಿವಾಣ ಹಾಕಿದ್ದಾರೆ.

ಲಾರಿಗಳ ಜೊತೆಗೆ ಆರು ಜನರನ್ನು ಪೋಲೀಸರು ಬಂಧಿಸಿದ್ದಾರೆ. ರಾತ್ರಿ ಹೊತ್ತಿನಲ್ಲಿ ಕೇರಳಕ್ಕೆ ಸಾಗಾಟವಾಗುತ್ತಿದ್ದ ಮರಳುಗಳು ಇದೀಗ ಹಾಡುಹಗಲೇ ಎಗ್ಗಿಲ್ಲದೆ ಸಾಗುತ್ತಿದ್ದು, ಈ ಅಕ್ರಮದ ಹಿಂದೆ ಜಿಲ್ಲೆಯ ಜನಪ್ರತಿನಿಧಿಗಳ ಕೈವಾಡವಿರುವುದು ಜಗಜ್ಜಾಹೀರಾದ ವಿಚಾರವಾಗಿದೆ.

0 Shares

Facebook Comments

comments