DAKSHINA KANNADA
ಕೇರಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ ; ಕೇಂದ್ರಕ್ಕೆ RSS ಒತ್ತಾಯ
ನವದೆಹಲಿ ಅಗಸ್ಟ್ 09: ಕೇರಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಕೂಡಲೇ ರಾಷ್ಟ್ರಪತಿ ಆಡಳಿತ ಹೇರಬೇಕೆಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ. ಆರ್.ಎಸ್. ಎಸ್ ಕಾರ್ಯಕರ್ತ ರಾಜೇಶ್ ಹತ್ಯೆ ಸೇರಿದಂತೆ ಈವರೆಗೆ ಕೇರಳದಲ್ಲಿ ನಡೆದ ಆರ್.ಎಸ್. ಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಕೇರಳದ ಕಮ್ಯುನಿಸ್ಟ್ ಸರಕಾರದ ವಿರುದ್ಧ ಇಂದು ದೆಹಲಿಯ ಜಂತರ್ ಮಂತರ್ ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ( RSS)ದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಎಲ್ ಡಿ ಎಫ್ ಆಡಳಿತ ಇರುವ ಕೇರಳದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಆರ್ ಎಸ್ ಎಸ್ ಕಾರ್ಯಕರ್ತರ ಹತ್ಯೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಖಂಡಿಸಿದ್ದು,
ಈ ಪ್ರತಿಭಟನೆ ಕೇರಳದಲ್ಲಿ ನಡೆಯುತ್ತಿರುವ ರಾಜಕೀಯ ಹತ್ಯೆಗಳಿಗೆ ಅಂತ್ಯಹಾಡಬೇಕು ಮತ್ತು ಕೇರಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಕೂಡಲೇ ರಾಷ್ಟ್ರಪತಿ ಆಡಳಿತ ಹೇರಬೇಕೆಂದು ಪ್ರತಿಭಟನಕಾರರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ಇದುವರೆಗೆ ಕೇರಳದಲ್ಲಿ ಸುಮಾರು 300 ಆರ್ ಎಸ್ ಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ಹತ್ಯೆಯಾಗಿದ್ದು ಈ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕೆಂದು ಆಗ್ರಹಿಸಿದರು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕೇರಳದಲ್ಲಿ ನಡೆಯುತ್ತಿರುವ ರಾಜಕೀಯ ಪ್ರೇರಿತ ಹತ್ಯೆಗಳ ವಿರುದ್ದ ದೇಶದ ರಾಜಧಾನಿ ದೆಹಲಿಯಲ್ಲಿ ಜನವರಿ ಯಿಂದ ನಡೆಯುತ್ತಿರುವ ಎರಡನೇ ಪ್ರತಿಭಟನೆ ಇದಾಗಿದೆ.
You must be logged in to post a comment Login