ಪುತ್ತೂರು.ಜುಲೈ.20: ಚಲಿಸುತ್ತಿದ್ದ ಬೈಕ್ ಮೇಲೆ ಮರ ಉರುಳಿದರೂ ಸಾವಿನ ದವಡೆಯಿಂದ ಪಾರಾಧ ಘಟನೆ ಪುತ್ತೂರಿನ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಸ್ತೆಯ ಓಡ್ಲಾ ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ.

ಬೈಕ್ ಸವಾರ ತಲೆಗೆ ಹೆಲ್ಮೆಟ್ ಧರಿಸಿದ ಪರಿಣಾಮ ಅದೃಷ್ಟವಶಾತ್ ಪ್ರಾಣ ಉಳಿಸಿಕೊಂಡಿದ್ದಾನೆ.ಮರ ಉರುಳಿದ ಪರಿಣಾಮ ವಿದ್ಯುತ್ ಕಂಬಗಳು ತುಂಡಾಗಿ ಬಿದ್ದಿದ್ದು,ವಿದ್ಯುತ್ ಸರಬರಾಜಿಗೂ, ರಸ್ತೆ ಸಂಚಾರಕ್ಕೂ ತೊಡಕು ಉಂಟಾಯಿತು. ಸ್ಥಳೀಯರ ನೆರವಿನೊಂದಿಗೆ ಅಧಿಕಾರಿಗಳು ಸ್ಥಳಕ್ಕೆ ಬಂದು ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Facebook Comments

comments