BANTWAL
ಡಾ.ಡಿ ವಿರೇಂದ್ರ ಹೆಗ್ಗಡೆ ಪಟ್ಟಾಭಿಷೇಕದ 50ನೇ ವರ್ಷಾಚರಣೆ
ಡಾ.ಡಿ ವಿರೇಂದ್ರ ಹೆಗ್ಗಡೆ ಪಟ್ಟಾಭಿಷೇಕದ 50ನೇ ವರ್ಷಾಚರಣೆ
ಬೆಳ್ತಂಗಡಿ ಅಕ್ಟೋಬರ್ 24: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದು ಹಬ್ಬದ ಸಂಭ್ರಮ. ಸ್ವರ್ಗವೇ ಧರೆಗಿಳಿದು ಬಂದಂತೆ ಸಿಂಗಾರಗೊಂಡಿದೆ ಕೊಡುವ ಕ್ಷೇತ್ರ. ಧರ್ಮಸ್ಥಳದ ಧರ್ಮಾಧಿಕಾರಿಯಾಗಿ ಡಾ ಡಿ ವೀರೇಂದ್ರ ಹೆಗ್ಗಡೆ ಅವರು ಪಟ್ಟಾಭಿಷಕ್ತರಾಗಿ ಇಂದು 50 ವರ್ಷ ತಂದಿದೆ. ಈ ಹಿನ್ನೆಲೆಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷಕ್ತರಾದ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಇಂದು ವರ್ಧಂತ್ಯೋತ್ಸವ ಸಂಭ್ರಮ.
ಇಂದು ಮುಂಜಾನೆಯಿಂದಲೇ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಡಗರ ಮನೆ ಮಾಡಿದೆ. ಮುಂಜಾನೆ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಕ್ಷೇತ್ರದ ಚಂದ್ರನಾಥ ಸ್ವಾಮಿ ಬಸದಿ ಹಾಗೂ ಮಂಜುನಾಥ ಸ್ವಾಮೀ ದೇವಾಲಯ ದಲ್ಲಿ ಧಾರ್ಮಿಕ ವಿಧಿ ವಿಧಾನಗಳ ಮೂಲಕ ವಿಶೇಷ ಪೂಜೆ ಸಲ್ಲಿಸಲಾಯಿತು.
ಡಾ. ಡಿ ವೀರೇಂದ್ರ ಹೆಗ್ಗಡೆಯವರು ಪಟ್ಟಾಭಿಷಕ್ತರಾಗಿ 50 ವರ್ಷ ಸಂದ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದಲೇ ಅಭಿಮಾನಿಗಳು ಹಾಗೂ ಭಕ್ತರ ದಂಡು ವೀರೇಂದ್ರ ಹೆಗ್ಗಡೆಯವರ ಮನೆಯ ಮುಂದೆ ಜಮಾಯಿಸಿದರು. ಸಾವಿರಾರು ಸಂಖ್ಯೆಯಲ್ಲಿ ಸೇರಿದ ಭಕ್ತರು ಧರ್ಮಾಧಿಕಾರಿಗಳಿಗೆ ಫಲಪುಷ್ಪ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಧರ್ಮಸ್ಥಳಕ್ಕೆ ಭೇಟಿ ನೀಡಿದ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೆಗ್ಗಡೆಯವರ ನಿವಾಸಕ್ಕೆ ತೆರಳಿ ಸುಬ್ರಹ್ಮಣ್ಯ ದೇವಾಲಯದ ಪ್ರಸಾದ ನೀಡಿ ವೀರೇಂದ್ರ ಹೆಗ್ಗಡೆಯವರಿಗೆ ಶಾಲು ಹೊದಿಸಿ ಫಲಪುಷ್ಪ ನೀಡಿ ಅಭಿನಂದಿಸಿದರು.
You must be logged in to post a comment Login