UDUPI
ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪಿ ಪೊಲೀಸ್ ಬಲೆಗೆ
ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪಿ ಪೊಲೀಸ್ ಬಲೆಗೆ
ಉಡುಪಿ ಅಕ್ಟೋಬರ್ 26: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಉಡುಪಿ ಕೋಟ ಠಾಣೆಯ ಪೊಲೀಸರು ಬಂಧಿಸಿದ್ದಾರೆ .ಬಂಧಿತನನ್ನು ಸೊಹೈಲ್ ಮಹಮ್ಮದ್ ಅಲಿ ಎಂದು ಗುರುತಿಸಲಾಗಿದೆ.
ಈತ ಯುವತಿಯೊಬ್ಬಳನ್ನು ಪ್ರೀತಿಯ ಜಾಲಕ್ಕೆ ಸಿಲುಕಿಸಿ ಮದುವೆಯಾಗುವುದಾಗಿ ನಂಬಿಸಿದ್ದ. ದೈಹಿಕ ಸಂಪರ್ಕಕ್ಕೆ ಒಪ್ಪದ ಯುವತಿಗೆ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿದೆ .
ಈಗ ಯುವತಿ ಮಗುವಿಗೆ ಜನ್ಮ ನೀಡಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಪರಾರಿಯಾಗಲು ಯತ್ನಿಸಿದ ಸೋಹೆಲ್ ನನ್ನು ಪೊಲೀಸರು ಬಂಧಿಸಿದ್ದಾರೆ .
You must be logged in to post a comment Login