LATEST NEWS
ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ವೈದ್ಯರ ಮುಷ್ಕರ
ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ವೈದ್ಯರ ಮುಷ್ಕರ
ಮಂಗಳೂರು ನವೆಂಬರ್ 16: ಸರ್ಕಾರದ ವಿರುದ್ದ ತಿರುಗಿಬಿದ್ದಿರುವ ವೈದ್ಯರು ತಮ್ಮ ಮುಷ್ಕರವನ್ನು ತೀವ್ರ ಗೊಳಿಸಿದ್ದಾರೆ. ಕೆಪಿಎಂಇ ಕಾಯ್ದೆ ಅನುಷ್ಠಾನ ಗೊಳಿಸುವುದನ್ನು ವಿರೋಧಿಸಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಖಾಸಗಿ ಆಸ್ಪತ್ರೆಯ ವೈದ್ಯರು ಆರೋಗ್ಯ ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆಗೆ ಇಳಿಯಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಅನಿರ್ದಿಷ್ಟಾವಧಿಯ ವರೆಗೆ ಎಲ್ಲಾ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್ ಗಳು ಬಂದ್ ಮಾಡಲು ನಿರ್ದರಿಸಲಾಗಿದೆ. ರೋಗಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟು ಭಾರತೀಯ ವೈದ್ಯಕೀಯ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕ ಇಂದಿನಿಂದ ಮುಷ್ಕರವನ್ನು ಆರಂಭಿಸದೆ ಮುಷ್ಕರದ ಬಗ್ಗೆ ರೋಗಿಗಳಿಗೆ ಮಾಹಿತಿ ನೀಡಿ ನಾಳೆಯಿಂದ ಅನಿರ್ದಿಷ್ಟಾವಧಿಯವರೆಗೆ ಮುಷ್ಕರ ಆರಂಭಿಸಲು ವೈದ್ಯಕೀಯ ಸಂಘ ನಿರ್ಧರಿಸಿದೆ.
ನಾಳೆಯಿಂದ ಮುಷ್ಕರ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿ ವಿಭಾಗವು ಸ್ಥಗಿತಗೊಳ್ಳಲಿದೆ .ಆದರೆ ತುರ್ತು ಸೇವೆಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ವೈದ್ಯಕೀಯ ಸಂಘ ತಿಳಿಸಿದೆ .
You must be logged in to post a comment Login