Connect with us

  DAKSHINA KANNADA

  ನಿಂತಿದ್ದ ಲಾರಿಗೆ ಲಾರಿ ಢಿಕ್ಕಿ, ಒರ್ವ ಸಾವು.

  ಪುತ್ತೂರು, ಜುಲೈ,19: ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಈಚರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿಯಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪುತ್ತೂರು ಸಮೀಪದ ಉದನೆ ಬಳಿ ಸಂಭವಿಸಿದೆ.

  ಮೃತಪಟ್ಟ ವ್ಯಕ್ತಿಯನ್ನು ಉಪ್ಪಿನಂಗಡಿಯ ನಿವಾಸಿ ಇಲ್ಯಾಸ್ ಎಂದು ಗುರುತ್ತಿಸಲಾಗಿದೆ. ಮಿತ್ಸುಬಿಷಿ ಈಚರ್ ಲಾರಿಯಲ್ಲಿ ಆತ ಕ್ಲೀನರ್ ಆಗಿ ದುಡಿಯುತ್ತಿದ್ದ . ಹಾಸನದಿಂದ ತರಕಾರಿ ಹೇರಿಕೊಂಡು ಬರುತ್ತಿದ್ದ ಈಚರ್ ಲಾರಿ ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಪರಿಣಾಮ ಈ ದುರ್ಘಟನೆ ನಡೆದಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

  Share Information
  Advertisement
  Click to comment

  You must be logged in to post a comment Login

  Leave a Reply