ಹರ್ಯಾಣ, ಆಗಸ್ಟ್ 26: ಇಲ್ಲಿನ ಪಂಚಕುಲ ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಿದ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದ ಪರಿಣಾಮ 30ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಪಂಚಕುಲದಲ್ಲಿ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಹರ್ಯಾಣ ಮತ್ತು ಪಂಜಾಬ್, ದೆಹಲಿ, ರಾಜಸ್ಥಾನಗಳಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ. ಅನೇಕ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಪಂಚಕುಲ, ಬಟಿಂಡಾ, ಫಿರೋಜ್ ಪುರ್ ಮತ್ತು ಮಾನ್ಸಾದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ರೊಚ್ಚಿಗೆದ್ದ ಬೆಂಬಲಿಗರು ಬೆಂಕಿಹಚ್ಚುವುದು, ಸಾರ್ವಜನಿಕ ಆಸ್ತಿಪಾಸ್ತಿಯನ್ನು ಹಾನಿಗೊಳಿಸತೊಡಗಿದ್ದಾರೆ. ಸಿಂಗ್ ಅನುಯಾಯಿಗಳು ಪೊಲೀಸರ ನಡುವೆ ಘರ್ಷಣೆ ಮುಂದುವರಿದಿದೆ. ಘಟನೆಯಲ್ಲಿ  ಪೋಲಿಸ್ ಸಹಿತ 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.ಮಾದ್ಯಮಗಳ ವಾಹನಗಳು, ಪೋಲಿಸ್ ವಾಹನಗಳು, ಕಾರು ಮತ್ತು ಅಗ್ನಿಶಾಮಕ ವಾಹನಕ್ಕೆ ಬೆಂಕಿ ಹಚ್ಚಲಾಗಿದೆ. ಪೊಲೀಸರು ಅಶ್ರುವಾಯು, ಗಾಳಿಯಲ್ಲಿ ಗುಂಡು, ಜಲಫಿರಂಗಿ ಬಳಸಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸಪಡುತ್ತಿದ್ದಾರೆ.

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಚಕುಲ ಸಿಬಿಐ ವಿಶೇಷ ನ್ಯಾಯಾಲಯ ವಿವಾದಿತ ಸ್ವಯಂಘೋಷಿತ ದೇವಮಾನವ ರಾಮ್ ರಹೀಮ್ ಗುರ್ಮಿತ್ ಸಿಂಗ್ ಅವರನ್ನು ದೋಷಿ ಎಂದು ಘೋಷಿಸಿದ್ದು, ಆಗಸ್ಟ್ 28 ಕ್ಕೆ ಶಿಕ್ಷಯ ಪ್ರಮಾಣ ನ್ಯಾಯಾಲಯ ಪ್ರಕಟಿಸಲಿದೆ.  ಮುನ್ನಚ್ಚಚ್ಚರಿಕೆಯ ಅಂಗವಾಗಿ ವಿಶೇಷ ಸಿಬಿಐ ನ್ಯಾಯಾಲಯದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿದ್ದರೂ ಕೂಡಾ ಗುರ್ಮಿತ್ ರಾಮ್ ರಹೀಮ್ ಸಿಂಗ್ ಅನುಯಾಯಿಗಳು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು. ಅರೆಸೇನಾಪಡೆ, ಪೊಲೀಸ್ ಪಡೆಯನ್ನೂ ನಿಯೋಜಿಸಲಾಗಿತ್ತು. ಆದರೆ ಕೋರ್ಟ್ ತೀರ್ಪು ಪ್ರಕಟಿಸಿದ ಕೂಡಲೇ ಪಂಚಕುಲದಲ್ಲಿ ಹಿಂಸಾಚಾರ ಭುಗಿಲೆದ್ದಿತು.ಆಗಸ್ಟ್  28 ರಂದು ಗುರ್ಮಿತ್ ರಾಮ್ ರಹೀಂ ಸಿಂಗ್ ಅವರನ್ನು ಭದ್ರತೆಯ ದೃಷ್ಟಿಯಿಂದ ನ್ಯಾಯಾಲಯಕ್ಕೆ ಕರೆತರುವುದು ಅನುಮಾನವಾಗಿದೆ. ಆದರೆ ವಿಡಿಯೋ ಕಾನ್ಪೆರೆನ್ಸ್ ಮೂಲಕ ವಿಶೇಷ ಜೈಲಿನಲ್ಲಿರುವ ರಾಮ್ ರಹೀಂ ಗೆ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಪ್ರಕಟಿಸಲಿದ್ದಾರೆ.