LATEST NEWS
ಪತ್ರಕರ್ತನ ಹತ್ಯೆಗೆ ಸುಫಾರಿ ಹಾಯ್ ಬೆಂಗಳೂರು ಸಂಪಾದಕ ರವಿಬೆಳೆಗೆರೆ ಆರೆಸ್ಟ್
ಪತ್ರಕರ್ತನ ಹತ್ಯೆಗೆ ಸುಫಾರಿ ಹಾಯ್ ಬೆಂಗಳೂರು ಸಂಪಾದಕ ರವಿಬೆಳೆಗೆರೆ ಆರೆಸ್ಟ್
ಬೆಂಗಳೂರು ಡಿಸೆಂಬರ್ 8: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪದ ಮೇಲೆ ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ಹಾಗೂ ಹಿರಿಯ ಪತ್ರಕರ್ತ ರವಿ ಬೆಳಗೆರೆ ಅವರನ್ನು ಶುಕ್ರವಾರ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಂದರ್ಭದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಶಾರ್ಪ್ ಶೂಟರ್ ಶಶಿಧರ್ ಮುಂಡೇವಾಡಗಿ ಹಾಗೂ ಸಹಚರರು ವಿಚಾರಣೆ ವೇಳೆ ಈ ವಿಷಯ ಬಾಯ್ಬಿಟ್ಟಿದ್ದು, ಹಾಯ್ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸುನಿಲ್ ಹೆಗ್ಗರವಳ್ಳಿ ಅವರನ್ನು ಕೊಲ್ಲಲು ರವಿ ಬೆಳಗೆರೆ ಸುಪಾರಿ ಕೊಟ್ಟಿದ್ದರು ಎಂದು ಹೇಳಿದ್ದಾರೆ.
ವಿಚಾರಣೆ ವೇಳೆ ವಿಜಯಪುರ ಮೂಲದ ಶಶಿಧರ್, ರವಿ ಬೆಳಗೆರೆ ಅವರು 30 ಲಕ್ಷ ರು ಸುಪಾರಿ ನೀಡಿ, ಸುನಿಲ್ ಹೆಗ್ಗರವಳ್ಳಿಯನ್ನು ಕೊಲ್ಲಲು ಸೂಚಿಸಿದ್ದರು ಎಂದು ಹೇಳಿದ್ದರು. ಈ ನಿಟ್ಟಿನಲ್ಲಿ ಸಿಸಿಬಿ ಪೊಲೀಸರು ರವಿ ಬೆಳಗೆರೆ ವಿರುದ್ಧ ಐಪಿಸಿ ಸೆಕ್ಷನ್ 307, 120(ಬಿ) ಅಡಿ ಎಫ್ ಐಆರ್ ದಾಖಲಿಸಿಕೊಂಡಿದ್ದು, ಹೆಚ್ಚಿನ ವಿಚಾರಣೆಗಾಗಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
You must be logged in to post a comment Login