ಮಂಗಳೂರು ಅಗಸ್ಟ್ 16: ಕಳೆದ ಎರಡು ವರ್ಷಗಳಿಂದ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತರ ಕೊಲೆಗಳಲ್ಲಿ ಪಿಎಫ್ಐ ಸಂಘಟನೆ ಕೈವಾಡ ಸಾಬೀತಾಗಿದ್ದು. ಈ ಹಿನ್ನೆಲೆಯಲ್ಲಿ ಪಿಎಫ್ಐ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಪಟ್ಟಿಯಲ್ಲಿ ಸೇರಿಸಬೇಕೆಂದು ವಿಶ್ವ ಹಿಂದು ಪರಿಷತ್ ಬಜರಂಗದಳ, ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಈ ಕುರಿತು ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ, ಮೂಡುಬಿದಿರೆ ಪ್ರಶಾಂತ್ ಪೂಜಾರಿ, ಬೆಂಗಳೂರಿನಲ್ಲಿ ರುದ್ರೇಶ್, ಮೈಸೂರಿನ ರಾಜು ಸೇರಿದಂತೆ ಬಂಟ್ವಾಳದ ಶರತ್ ಮಡಿವಾಳ ಹತ್ಯೆಯಲ್ಲಿ ಪಿಎಫ್ಐ ಕಾರ್ಯಕರ್ತರ ಬಂಧನವಾಗಿದೆ ಎಂದು ಹೇಳಿದರು.
ಪಿಎಫ್ಐ ಒಂದು ದೇಶದ್ರೋಹಿ ಸಂಘಟನೆಯಾಗಿದ್ದು ಅದನ್ನು ಭಯೋತ್ಪಾದಕ ಸಂಘಟನೆಯ ಪಟ್ಟಿಯಲ್ಲಿ ಸೇರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಕೇಂದ್ರ ಗುಪ್ತಚರ ಇಲಾಖೆ ಪಿಎಫ್ಐ ಸಂಘಟನೆಯ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರೂ ಈವರೆಗೆ  ಕ್ರಮ ಕೈಗೊಳ್ಳಲಾಗಿಲ್ಲ ಎಂದು ವಿಷಾದಿಸಿದರು .
ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ್ ಹತ್ಯೆ ಪ್ರಕರಣದಲ್ಲಿ ಈಗಾಗಲೇ ಇಬ್ಬರು ಪಿಎಫ್ಐ ಕಾರ್ಯಕರ್ತರನ್ನು ಬಂಧಿಸಲಾಗಿದೆ ಇನ್ನುಳಿದ ಮೂರು ಮಂದಿ ಆರೋಪಿಗಳನ್ನು ಶೀಘ್ರ ಬಂಧಿಸಬೇಕೆಂದು ಅವರು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದರು .ಈ ಹತ್ಯೆ ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಡಿ ಪಿ ಐ ಹಾಗೂ ಪಿಎಫ್ಐ ಸಂಘಟನೆಯ  ಮುಖಂಡರ ಪಾತ್ರವಿದ್ದು ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು .

0 Shares

Facebook Comments

comments