DAKSHINA KANNADA
ಪಿಎಫ್ ಐ ಕೆಎಫ್ ಡಿ ಗಳಿಗೆ ಸಿದ್ದರಾಮಯ್ಯ ಬೆಂಬಲ;ಸಂಸದ ಪ್ರತಾಪ್ ಸಿಂಹ ಆರೋಪ
ಮಂಗಳೂರು, ಅಗಸ್ಟ್ 23 : ಕೆಎಫ್ ಡಿ ,ಪಿಎಫ್ಐ ಸಂಘಟನೆಯ ಕಾರ್ಯಕರ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲ ಇದೆ ಮತ್ತು ಇವರು ನಡೆಸುವ ಸಮಾಜಘಾತುಕ ಕೃತ್ಯಗಳು ಸಿದ್ದರಾಮಯ್ಯ ನವರಿಗೆ ಗೊತ್ತಿದೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಪ್ರತಾಪ್ ಸಿಂಹ 2011 ರಲ್ಲಿ ನಡೆದ ವಿದ್ಯಾರ್ಥಿಗಳ ಅಪಹರಣ ಮತ್ತು ಕೊಲೆ ಪ್ರಕರಣದಲ್ಲಿ ಪಿಎಫ್ಐ ಅವರ ನೇರ ಕೈವಾಡ ಇತ್ತು.ಆದರೆ ಆರೋಪಿಗಳಿಗೆ ಶಿಕ್ಷೆ ನೀಡೋದಕ್ಕೆ ಸಾಧ್ಯವಾಗಿರಲಿಲ್ಲ.ಸಿದ್ದರಾಮ್ಯನವರ ಸರಕಾರ ಬರುತ್ತಲೇ ಅವರ ಮೇಲಿನ ಎಲ್ಲಾ ಪ್ರಕರಣಗಳನ್ನು ಹಿಂಪಡೆದು ನೈತಿಕ ಬೆಂಬಲ ನೀಡಿದ್ದಾರೆ. ಇವರ ಎಲ್ಲಾ ಪ್ರಕರಣಗಳನ್ನು ಸರ್ಕಾರ ಹಿಂದೆ ಪಡೆದ ಬಳಿಕ ಹಲವು ಹಿಂದೂ ನಾಯಕರ ಹತ್ಯೆಗಳು ರಾಜ್ಯದಲ್ಲಿ ನಡೆಯಿತು. ಈ ಎಲ್ಲಾ ಹಿಂದೂ ನಾಯಕರ ಹತ್ಯೆ ಹಿಂದೆ ಕೆಎಫ್ ಡಿ , ಪಿಎಫ್ಐ ಇದೆ ಎಂದ ಪ್ರತಾಪ್ ಸಿಂಹ ರಾಜ್ಯ ಸರಕಾರಕ್ಕೆ ಇದನ್ನು ನಿಷೇಧ ಮಾಡುವ ಇರಾದೆ ಇಲ್ಲ ಬದಲಿಗೆ ಅವರನ್ನು ಪೋಷಿಸುವ ಕಾರ್ಯ ಮಾಡುತ್ತಿದೆ ಎಂದು ಆರೋಪಿದ್ದಾರೆ.
ಕರಾವಳಿಯಲ್ಲಿ ಹಿಂದುಗಳ ಮೇಲೆ ನಿರಂತರವಾಗಿ ದಾಳಿಗಳು ನಡೆಯುತ್ತಿವೆ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರಾದ ರಮಾನಾಥ ರೈ ಹಿಂದೂ ನಾಯಕರ ಮೇಲೆಯೇ ಆಕ್ರಮಣ ಮಾಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ರಾಜೀನಾಮೆ ನೀಡಬೇಕು ಮತ್ತು ಕೆಎಫ್ ಡಿ ಹಾಗೂ ಪಿಎಫ್ಐ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಸೆಪ್ಟೆಂಬರ್ 7 ರಂದು ” ಮಂಗಳೂರು ಚಲೋ ” ಕಾರ್ಯಕ್ರಮ ಅಯೋಜಿಸಲಾಗಿದ್ದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬ್ರಹತ್ ಪ್ರತಿಭಟನೆ ಸಭೆ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ರಾಜ್ಯದ ಐದು ಕೇಂದ್ರಗಳಿಂದ ಮಂಗಳೂರಿಗೆ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನಲ್ಲಿ ನಡೆಯುವ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮಾತನಾಡಲಿದ್ದಾರೆ ಎಂದು ಮಾಹಿತಿ ನೀಡಿದರು. ಸಂಸದ ನಳಿನ್ ಕುಮಾರ್ ಕಟೀಲ್, ಹಿಂದೂ ಹಿತ ರಕ್ಷಣಾ ವೇದಿಕೆಯ ಸಂಚಾಲಕ ಹರೀಶ್ ಪೂಂಜಾ ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
You must be logged in to post a comment Login