Connect with us

DAKSHINA KANNADA

ಪುತ್ತೂರು ನಗರ ಠಾಣಾ ಪೊಲೀಸರ ಭರ್ಜರಿ ಕಾರ್ಯಾಚರಣೆ : ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ, ವಾಹನ ಸಹಿತ ಓರ್ವ ವಶಕ್ಕೆ

ಪುತ್ತೂರು, ಸೆಪ್ಟೆಂಬರ್ 25: ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಿ ಓರ್ವನನ್ನು ವಶಕ್ಕೆ ಪಡೆದ ಘಟನೆ ಸೆ.25 ರಂದು ಮುಂಜಾನೆ ಮುರ ರೈಲ್ವೇ ಬ್ರಿಡ್ಜ್ ಸಮೀಪ ನಡೆದಿದೆ.

ಪುತ್ತೂರು ನಗರ ಠಾಣಾ ಪಿಎಸ್ಐ ಶ್ರೀಕಾಂತ್ ರಾಥೋಡ್ ಮತ್ತು ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿರುವುದನ್ನು ಗಮನಿಸಿ ವಿಚಾರಣೆ ನಡೆಸಿ, ಓರ್ವನನ್ನು ವಶಕ್ಕೆ ಪಡೆದಿದ್ದು, ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ.ಕಾರ್ಯಾಚರಣೆಯಲ್ಲಿ ಪುತ್ತೂರು ನಗರ ಠಾಣೆಯ ಪೊಲೀಸ್ ನಿರೀಕ್ಷಕರಾದ ಸುನೀಲ್ ಕುಮಾರ್, ಪಿಎಸ್ಐ ಶ್ರೀಕಾಂತ್ ರಾಥೋಡ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Advertisement
Click to comment

You must be logged in to post a comment Login

Leave a Reply