ಶೇಂದಿ (ನೀರಾ) ಮೂರ್ತೆಗೆ ತೆಂಗಿನ ಮರ ಹತ್ತಿದ್ದ ವ್ಯಕ್ತಿ ತೆಂಗಿನ ಮರದಲ್ಲೇ ದಾರುಣ ಅಂತ್ಯ ಕಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.
ಪುತ್ತೂರು : ಶೇಂದಿ (ನೀರಾ) ಮೂರ್ತೆಗೆ ತೆಂಗಿನ ಮರ ಹತ್ತಿದ್ದ ವ್ಯಕ್ತಿ ತೆಂಗಿನ ಮರದಲ್ಲೇ ದಾರುಣ ಅಂತ್ಯ ಕಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.

ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದಲ್ಲಿ ಸಂಜೆ ಈ ಘಟನೆ ನಡೆದಿದೆ. ಮೃತ ವ್ಯಕ್ತಿ ಕೇರಳ ಮೂಲದವರಾಗಿದ್ದು ಗುರುತು ಪತ್ತೆ ಕಾರ್ಯ ನಡೆಯುತ್ತಿದೆ. ಕೊಲ್ಲಮೊಗ್ರು ಬಳಿಯ ಪನ್ನೆಯ ವ್ಯಕ್ತಿಯೋರ್ವರ ಜಾಗದ ತೆಂಗಿನ ಮರದಿಂದ ಈತ ಶೇಂದಿ( ನೀರಾ) ಮೂರ್ತೆ ನಡೆಸುತ್ತಿದ್ದರು. ಎಂದಿನಂತೆ ಶೇಂದಿ ಇಳಿಸಲು ಮರ ಹತ್ತಿದ್ದ ಅವರು ಅಲ್ಲೇ ಅಸ್ವಸ್ಥಗೊಂಡು ಬೊಬ್ಬೆ ಹಾಕಿದರೆನ್ನಲಾಗಿದೆ. ಇದನ್ನು ಕೇಳಿಸಿಕೊಂಡ ಸ್ಥಳೀಯ ರೋರ್ವರು ಗಮನಿಸಿ ಮರ ಹತ್ತಿದಾಗ ಅವರು ಅವರು ಉಸಿರಾಡುತ್ತಿದ್ದರೆನ್ನಲಾಗಿದೆ. ಬಳಿಕ ಅಗ್ನಿಶಾಮಕ ದಳದವರಿಗೆ ಸ್ಥಳೀಯರು ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬಂದಿ ಮರದಿಂದ ಆತನನ್ನು ಇಳಿಸಿದ್ದು ಅದಾಗಲೇ ಮೃತ ಪಟ್ಟಿರುವುದಾಗಿ ತಿಳಿದು ಬಂದಿದ್ದು ಈ ಸಂಬಂಧ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



