ಬೆಳ್ತಂಗಡಿಯ ಇಳಂತಿಲ ಗ್ರಾಮದ ಅಪ್ರಾಪ್ತೆಯ ಆತ್ಮಹತ್ಯೆ ಕುರಿತ ಕಾರಣ ಪೊಲೀಸರ ತನಿಖೆಯಿಂದ ಬಹಿರಂಗವಾಗಿದೆ.

ಪುತ್ತೂರು:  ಬೆಳ್ತಂಗಡಿಯ ಇಳಂತಿಲ ಗ್ರಾಮದ ಅಪ್ರಾಪ್ತೆಯ ಆತ್ಮಹತ್ಯೆ ಕುರಿತ ಕಾರಣ ಪೊಲೀಸರ ತನಿಖೆಯಿಂದ ಬಹಿರಂಗವಾಗಿದೆ.

ಅಪ್ರಾಪ್ತೆಯ ಜೀವಾಂತ್ಯದ ಹಿಂದೆ ಲೈಂಗಿಕ ಕಿರುಕುಳ ಕಾರಣವಾಗಿರುವುದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದ್ದು ಈ ಸಂಬಂಧ ಅಪ್ರಾಪ್ತ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲು ಮಾಡಿದ್ದಾರೆ..

ಕಳೆದ ನವೆಂಬರ್ ತಿಂಗಳ ಮೊದಲ ವಾರದಲ್ಲಿ ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿ ಬಳಿಕ ನ.12 ರಂದು ಸಾವನ್ನಪ್ಪಿದ್ದ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ 15 ವರ್ಷದ ಸಂತ್ರಸ್ಥೆ ಆತ್ಮಹತ್ಯೆಗೆ  ಲೈಂಗಿಕ ಕಿರುಕುಳ ಕಾರಣವೆಂಬುವುದು ಪೊಲೀಸ್ ತನಿಖೆಯಿಂದ ಧೃಡಪಟ್ಟಿದೆ.

ಮೃತ ಬಾಲಕಿಯು ಉಪ್ಪಿನಂಗಡಿಯ ಪ್ರೌಢಶಾಲೆಯಲ್ಲಿ ಕಲಿಯುತ್ತಿದ್ದು, ನವೆಂಬರ್ 4ರಂದು ಈಕೆ ತಲೆನೋವು ಎಂದು ಹೇಳಿ ಶಾಲೆಗೆ ಹೋಗದೇ ಪಾರಡ್ಕದ ತನ್ನ ಮನೆಯಲ್ಲಿದ್ದಳು. ಮನೆಯಲ್ಲಿ ತಂದಿಟ್ಟಿದ್ದ ಹುಲ್ಲಿಗೆ ಸಿಂಪಡಿಸುವ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಗೊಂಡಿದ್ದಳು. ಕೂಲಿ ಕೆಲಸಕ್ಕೆ ಹೋಗಿದ್ದ ಈಕೆಯ ತಾಯಿ ವಿಷಯ ತಿಳಿದು ಆಟೋ ರಿಕ್ಷಾವೊಂದರಲ್ಲಿ ಚಿಕಿತ್ಸೆಗೆಂದು ಪುತ್ತೂರು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು.ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಬಾಲಕಿ ನ.12ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಳು . ಈ ಬಗ್ಗೆ ಕಡಬ ಪರಿಸರದ ಯುವಕ ಪೋನ್ ಮಾಡಿ ಕಿರುಕುಳ ನೀಡುತ್ತಿದ್ದ ಎಂದು ಮೃತಳ ತಾಯಿ ಪೊಲೀಸರಿಗೆ ದೂರು ನೀಡಿದ್ದಳು. ಈ  ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು, ಆಕೆಯ ಆತ್ಮಹತ್ಯೆಯ ಹಿಂದೆ ಲೈಂಗಿಕ ಕಿರುಕುಳ ಕಾರಣವಾಗಿರುವುದನ್ನು ಪತ್ತೆ ಹಚ್ಚಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪ್ರಧಾನ ಆರೋಪಿ ಅಪ್ರಾಪ್ತ ವಯಸ್ಕನಾಗಿದ್ದು, ಆತನೊಂದಿಗೆ ಕಿರುಕುಳಕ್ಕೆ ಸಹಕರಿಸಿದ ಪ್ರಶಾಂತ (21) ಎಂಬಾತನ ವಿರುದ್ದವೂ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆದಿದೆ.

Share Information