LATEST NEWS
ಪ್ರಕಾಶ್ ರೈಗೆ ಮೊಟ್ಟೆ ಎಸೆಯಲು ಪ್ರಯತ್ನ – ಒರ್ವನ ವಶಕ್ಕೆ ಪಡೆದ ಪೊಲೀಸರು
ಪ್ರಕಾಶ್ ರೈಗೆ ಮೊಟ್ಟೆ ಎಸೆಯಲು ಪ್ರಯತ್ನ – ಒರ್ವನ ವಶಕ್ಕೆ ಪಡೆದ ಪೊಲೀಸರು
ಮಂಗಳೂರು ಡಿಸೆಂಬರ್ 22: ದಕ್ಷಿಣಕನ್ನಡ ಜಿಲ್ಲಾಡಳಿತ ಆಯೋಜಿಸಿರುವ ಕರಾವಳಿ ಉತ್ಸವದ ಉದ್ಘಾಟನೆ ಕಾರ್ಯಕ್ರಮ ಇಂದು ಹಮ್ಮಿಕೊಳ್ಳಲಾಗಿತ್ತು. ಖ್ಯಾತ ಬಹುಭಾಷಾ ನಟ ಪ್ರಕಾಶ್ ರೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕರಾವಳಿ ಉತ್ಸವ ಉದ್ಘಾಟನಾ ಸಮಾರಂಭದಲ್ಲಿ ಪ್ರಕಾಶ್ ರೈ ಭಾಗವಹಿಸುವುದಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು.
ಈ ಹಿನ್ನಲೆಯಲ್ಲಿ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಭಾರಿ ಬಂದೋಬಸ್ತ್ ಕಲ್ಪಿಸಲಾಗಿತ್ತು. ಆದರೂ ಪ್ರಕಾಶ್ ರೈ ಅವರಿಗೆ ಮೊಟ್ಟೆ ಎಸೆಯಲು ಹೊಂಚು ಹಾಕುತ್ತಿದ್ದ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕರಾವಳಿ ಉತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಪ್ರಕಾಶ್ ರೈ ಅವರಿಗೆ ಮೊಟ್ಟೆ ಎಸೆಯಲು ಈ ಆರೋಪಿ ಪ್ರಯತ್ನಿಸುತ್ತಿದ್ದ ಎಂದು ಹೇಳಲಾಗಿದೆ. ಬಂಧಿತನನ್ನು ಹಿಂದೂ ಮಹಾಸಭಾದ ಕಾರ್ಯಕರ್ತ ಲತೀಶ್ ಎಂದು ಗುರುತಿಸಲಾಗಿದ್ದು , ಬರ್ಕೆ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಸೋಶಿಯಲ್ ಮೀಡಿಯಾಗಳಲ್ಲಿ ಪ್ರಕಾಶ್ ರೈ ಕರಾವಳಿಗೆ ಬರುವುದಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು. ಅಲ್ಲದೆ ಗೋ ಬ್ಯಾಕ್ ಪ್ರಕಾಶ್ ರಾಜ್ ಎಂದು ಬರೆದು ಸಾಮಾಜಿಕ ಜಾಲತಾಣಗಳಲ್ಲಿ ಸಿಟ್ಟನ್ನು ಹೊರಹಾಕಿದ್ದರು. ಈ ಹಿನ್ನಲೆಯಲ್ಲಿ ಕರಾವಳಿ ಉತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನ್ನು ಏರ್ಪಡಿಸಲಾಗಿತ್ತು.
You must be logged in to post a comment Login