ಮಂಗಳೂರು. ಜುಲೈ11 : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಗಲಭೆ ಹಿನ್ನಲೆಯಲ್ಲಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಇತ್ತೀಚೆಗೆ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರ ಕೊಲೆ, ಹಾಗೂ ನಂತರ ನಡೆದ ಗಲಭೆಗಳ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸರಿಪಡಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್. ಗಣೇಶ್ ಕಾರ್ಣಿಕ್, ಎಸ್ಪಿ ಸುದೀಂದ್ರ ಕುಮಾರ್ ರೆಡ್ಡಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
11
Jul, 2017