BANTWAL
ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಲಕ್ಷಾಂತರ ಹಣ ಕಳೆದುಕೊಂಡ ಬಿಜೆಪಿ ಕಾರ್ಯಕರ್ತರು
ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಲಕ್ಷಾಂತರ ಹಣ ಕಳೆದುಕೊಂಡ ಬಿಜೆಪಿ ಕಾರ್ಯಕರ್ತರು
ಬಂಟ್ವಾಳ ನವೆಂಬರ್ 11 : ಜಿಲ್ಲೆಯಲ್ಲಿ ನಡೆಯುತ್ತಿರುವ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ.
ಇಂದು ಬಂಟ್ವಾಳ ದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಸಾವಿರಾರು ಮಂದಿ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಕಳ್ಳರು ಕೈ ಚಳ ತೋರಿಸಿ ಸುಮಾರು 70 ಸಾವಿರ ಹಣ ಕಳ್ಳತನ ಮಾಡಿದ್ದಾರೆ. ಇದರ ಜೊತೆ 10 ಪರ್ಸ್ ಗಳು ಕೆಲವು ಮೊಬೈಲ್ ಗಳು ಕಳ್ಳತನವಾಗಿದೆ ಎಂದು ವರದಿಯಾಗಿದೆ.
ನಿನ್ನೆ ಬೆಳ್ತಂಗಡಿಯ ಪರಿವರ್ತನಾ ಯಾತ್ರೆಯಲ್ಲೂ ಕಳ್ಳರು ಕೈ ಚಳಕ ತೋರಿಸಿದ್ದರು. ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಸುಮಾರು 50 ಸಾವಿರ ರೂಪಾಯಿ ಹಣವನ್ನು ಕಳೆದುಕೊಂಡಿದ್ದರು.
You must be logged in to post a comment Login