Connect with us

DAKSHINA KANNADA

ಬೈಕ್ ಡಿಕ್ಕಿ,ಪಾದಚಾರಿ ಮಹಿಳೆ ಸಾವು

ಮಂಗಳೂರು,ಆಗಸ್ಟ್ 30 : ಪಾದಚಾರಿ ಮಹಿಳೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವಿಗೀಡಾದ ಘಟನೆ ಮಂಗಳೂರಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ. ಮೃತ ಮಹಿಳೆಯನ್ನು 55 ವರ್ಷದ ವಾರಿಜ ಎಂದು ಗುರುತ್ತಿಸಲಾಗಿದೆ. ಅತೀ ವೇಗ ಮತ್ತು ನಿರ್ಲಕ್ಷ್ಯದಿಂದ ಬೈಕ್ ಚಲಾಯಿಸದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಗೌತಮ್ ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ. ಗೌತಮ್ ನನ್ನು ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುರತ್ಕಲ್ ಸಂಚಾರಿ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.