UDUPI
ಮಹಾನ್ ಮಾನವತವಾದಿ ಕುವೆಂಪು :ಶಿವಾನಂದ ಕಾಪಶಿ
ಮಹಾನ್ ಮಾನವತವಾದಿ ಕುವೆಂಪು :ಶಿವಾನಂದ ಕಾಪಶಿ
ಉಡುಪಿ, ಡಿಸೆಂಬರ್ 29 : ವಿಶ್ವ ಮಾನವ ಸಂದೇಶ ನೀಡಿದ ಕವಿ ಕುವೆಂಪು ಸದಾ ಸ್ಮರಣೀಯರು ಅವರ ಸಾಹಿತ್ಯದಲ್ಲಿರುವ ಸಂದೇಶ ಎಲ್ಲಾ ಕಾಲಗಳಿಗೂ ಪ್ರಸ್ತುತ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.
ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಉಡುಪಿ ಇವರ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆದ ರಾಷ್ಟ್ರಕವಿ ಕುವೆಂಪುರವರ ಜಯಂತಿ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ-2017 ಉದ್ಘಾಟಿಸಿ ಮಾತನಾಡಿದರು.
ಕವಿ ಕುವೆಂಪು ಮಹಾನ್ ಮಾನವತವಾದಿ; ಅವರ ಸಾಹಿತ್ಯ ಸರ್ವ ಮಾನವರಿಗೆ ಅತ್ಯುತ್ತಮ ಜೀವನ ಮಾದರಿಯನ್ನು ತೋರಿಸುತ್ತಿದ್ದು, ಸಾಹಿತ್ಯಗಳು ನಮ್ಮ ಜೀವನದ ದೃಷ್ಟಿಕೋನವನ್ನು ವಿಸ್ತರಿಸುತ್ತದೆ ಎಂದು ಅಭಿಪ್ರಾಯಪಟ್ಟರು.
ಕನ್ನಡ ನಾಡಿಗೆ ಸಾಹಿತ್ಯಲೋಕದಲ್ಲಿ ಪ್ರಥಮ ಬಾರಿಗೆ ಜ್ಞಾನಪೀಠ ಪ್ರಶಸ್ತಿ ತಂದು ಕೊಟ್ಟ ಮಹಾನ್ ಸಾಹಿತಿ ಕುವೆಂಪು ಅವರು, ಅವರ ಸಾಹಿತ್ಯಗಳು ವಿಧ್ವತ್ತಿನಿಂದ ಕೂಡಿದ್ದು, ಇಡೀ ಜಗತ್ತಿಗೆ ದಾರಿದೀಪವಾಗಿದೆ ಎಂದು ಅವರು ಹೇಳಿದರು.
ಇಪ್ಪತ್ತನೆ ಶತಮಾನದ ಅದ್ಭುತ ಪ್ರತಿಭೆ ಹಾಗೂ ಸಮಾಜದ ಸಾಕ್ಷಿ ಪ್ರಜ್ಞೆ ಇರುವ ಈ ನಾಡಿನ ಶ್ರೇಷ್ಠ ಕವಿ ಕುವೆಂಪು.
ಸಾಹಿತ್ಯಲೋಕಕ್ಕೆ ಅಪಾರ ಕೊಡುಗೆ ನೀಡಿದ ಹೆಗ್ಗಳಿಕೆ ಇವರದ್ದು ಎಂದು ಕುಂದಾಪುರ ಭಂಡಾರ್ಕರ್ಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ವಿ. ರೇಖಾ ಬನ್ನಾಡಿ ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಉಡುಪಿ ತಾಲೂಕಿನ ತಹಶೀಲ್ದಾರ ಪ್ರದೀಪ್ ಕುರ್ಡೇಕರ್ ಎಸ್, ಪ್ರಾಂಶುಪಾಲ ವಿವೇಕ್ ಕುಮಾರ್, ಬೋರ್ಡ್ ಕಾಲೇಜಿನ ಪ್ರಾಂಶುಪಾಲ ವಿಲಾಸ್ ನಾಯಕ್ ಉಪಸ್ಥಿತರಿದ್ದರು.
You must be logged in to post a comment Login