Connect with us

  DAKSHINA KANNADA

  ಮೋಹನ್ ಆಳ್ವಾ ಪರ ಕಾರ್ಯಕ್ರಮ ತಡೆಗೆ ಯತ್ನ, ಅಖಿಲ ಭಾರತ ಹಿಂದೂ ಮಹಾಸಭಾದ ಕಾರ್ಯಕರ್ತರ ಬಂಧನ.

  ಮಂಗಳೂರು,ಅಗಸ್ಟ್ 10:ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಕಾವ್ಯಾ ಅನುಮಾನಾಸ್ಪದ ಸಾವಿನ ಬಳಿಕ ಇದೀಗ ಸಂಸ್ಥೆಯ ಅಧ್ಯಕ್ಷರಾದ ಮೋಹನ್ ಆಳ್ವ ಪರ ಹಾಗೂ ವಿರೋಧ ಅಭಿಪ್ರಾಯಗಳು ಘರ್ಷಣೆಯ ಹಂತಕ್ಕೆ ತಲುಪಿದೆ. ಕಲೆ, ಸಾಹಿತ್ಯ , ಸಾಂಸ್ಕೃತಿಕ ಕ್ರೀಡಾ ಸಾಧಕ-ಸಂಘಟಕರ ಕರೆ ಎನ್ನುವ ವೇದಿಕೆಯು ಇಂದು ಮಂಗಳೂರಿನ ಪುರಭವನದಲ್ಲಿ ಆಯೋಜಿಸಿದ್ದ ನಾಡಸಿರಿಯ ದ್ವನಿ ಆಳ್ವರೊಂದಿಗೆ ನಾವು ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಪ್ರಯತ್ನ ನಡೆದಿದೆ.

  ಅಖಿಲ ಭಾರತ ಹಿಂದೂ ಮಹಾಸಭಾಕ್ಕೆ ಸೇರಿದ ಕಾರ್ಯಕರ್ತರು ಈ ಕಾರ್ಯಕ್ರಮವನ್ನು ನಡೆಸಬಾರದೆಂದು ಎಚ್ಚರಿಕೆ ನೀಡಿದ್ದರಲ್ಲದೆ, ಪುರಭವನಕ್ಕೆ ಮುತ್ತಿಗೆ ಹಾಕಿ ಕಾರ್ಯಕ್ರಮವನ್ನು ತಡೆಯುವ ಯತ್ನಕ್ಕೂ ಕೈ ಹಾಕಿದ್ದಾರೆ. ಈ ಸಂಬಂಧ ಪೋಲೀಸರು ಮೂವರು ಅಖಿಲ ಭಾರತ ಹಿಂದೂ ಮಹಾಸಭಾಕ್ಕೆ ಸೇರಿದ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

  .  ಕಾರ್ಯಕ್ರಮದ ಹಿನ್ನಲೆಯಲ್ಲಿ ಪುರಸಭೆಯ ಸುತ್ತ ಬಿಗಿ ಪೋಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೋಲೀಸರು ಮುಂಜಾಗೃತಾ ಕ್ರಮವನ್ನು ವಹಿಸಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply