Connect with us

    LATEST NEWS

    RSS ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಹಿಂದೆ ಪಿಎಫ್ ಐ

    ಮಂಗಳೂರು, ಆಗಸ್ಟ್ 15 : ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ದಕ್ಷಿಣ ಕನ್ನಡ ಪೋಲಿಸರು ಯಶಸ್ವಿಯಾಗಿದ್ದಾರೆ. ಕಳೆದ ಒಂದು ತಿಂಗಳಿಂದ ಆರು ವಿಶೇಷ ತಂಡಗಳನ್ನು ರಚಿಸಿದ ಪೋಲಿಸರು ಪ್ರಮುಖ ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಚಾಮರಾಜ ನಗರ ಪಿಎಫ್ಐ ಜಿಲ್ಲಾಧಕ್ಷ ಖಲಿಲುಲ್ಲಾ, ಬಂಟ್ವಾಳ ಸಜಿಪ ನಿವಾಸಿ ಅಬ್ದುಲ್ ಶಾಫಿ  ಎಂದು ಗುರುತ್ತಿಸಲಾಗಿದೆ.ಈ ಕೃತ್ಯದ ಹಿಂದೆ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನವರು ಸೇರಿದ್ದಾರೆ ಎಂದು ತಿಳಿದು ಬಂದಿದೆ. ಇನ್ನುಳಿದ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಮುಂದುವರೆದಿದ್ದು, ಪೋಲಿಸರ ಒಂದು ತಂಡ ಚಾಮರಾಜ ನಗರ ಜಿಲ್ಲೆಗೆ ತೆರಳಿ ಆರೋಪಿ ಒಬ್ಬನ ಬಂಧನಕ್ಕೆ ಕಾರ್ಯಚರಣೆ ನಡೆಸಿದ್ದಾರೆ. ಪ್ರಮುಖ ಆರೋಪಿಗಳಲ್ಲಿ ಒಬ್ಬ ಈಗಾಗಲೇ ವೀದೇಶಕ್ಕೆ ಪರಾರಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ನಡುವೆ ಕಲಂದರ್ ಹಾಗೂ ಶರೀಫ್ ಎಂಬವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸ್ ತಂಡಕ್ಕೆ ಪಶ್ಚಿಮ ವಲಯ ಐಜಿಪಿ ಹರಿಶೇಖರನ್, 25 ಸಾವಿರ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ.ಜುಲೈ 4 ರಂದು ರಾತ್ರಿ ಬಂಟ್ವಾಳ ತಾಲೂಕಿನ ಬಿ ಸಿ ರೋಡ್ ಬಳಿ ತನ್ನ ಲಾಂಡ್ರಿ ಅಂಗಡಿಯ ಬಾಗಿಲು ಹಾಕಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಶರತ್ ಅವರ ಮೇಲೆ ಮಾರಕಾಸ್ತ್ರಗಳಿಂದ ಕಡಿದು ಪರಾರಿಯಾಗಿದ್ದರು. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಶರತ್ ಮಡಿವಾಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ಮೃತ ಪಟ್ಟಿದ್ದರು. ಈ ಹತ್ಯೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಶಾಂತಿಯ ವಾತಾವರಣ ನಿರ್ಮಾಣವಾಗಿತ್ತು.

    ವಿಡಿಯೋ ನ್ಯೂಸ್

    Share Information
    Advertisement
    Click to comment

    You must be logged in to post a comment Login

    Leave a Reply