ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಶಾಂತಿ ಸಭೆಗೆ ಮುಸ್ಲಿಂ ಸೆಂಟ್ರಲ್ ಕಮಿಟಿ ಮುಖಂಡರನ್ನು ಆಹ್ವಾನಿಸದಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಶಾಂತಿ ಸಭೆಗೆ ಮುಸ್ಲಿಂ ಸೆಂಟ್ರಲ್ ಕಮಿಟಿ ಮುಖಂಡರನ್ನು ಆಹ್ವಾನಿಸದಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.

 

ಈ ಕುರಿತು ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಮಹಮ್ಮದ್ ಮಸೂದ್ ಜಿಲ್ಲೆಯಲ್ಲಿ ಶಾಂತಿ ನೆಲೆಗೊಳಿಸಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿಫಲರಾಗಿದ್ದಾರೆ ಎಂದು ಅವರು ದೂರಿದರು. ಮಂಗಳೂರಿನಲ್ಲಿ ನಡೆಸಲಾದ ಶಾಂತಿ ಸಭೆ ಕೇವಲ ರಾಜಕೀಯ  ಸಭೆ ಹೊರತು ಶಾಂತಿ ಸಭೆ ಆಗಿರಲಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು. ಧಾರ್ಮಿಕ ಮುಖಂಡರನ್ನು , ಸಂಘಟನೆಯ ಮುಖಂಡರನ್ನು ಹೊರಗಿಟ್ಟು ಶಾಂತಿ ಸಭೆ ನಡೆಸಿರುವುದು  ಸರಿಯಲ್ಲ ಎಂದು ಅವರು ಕಿಡಿಕಾರಿದರು. ಜಿಲ್ಲೆಯ 4 ತಾಲೂಕುಗಳಲ್ಲಿ 52 ದಿನಗಳಿಂದ ಸೆಕ್ಷನ್ 144 ನಿಷೇಧಾಜ್ಞೆ ಹಾಕಿ ಪ್ರಯೋಜನ ಏನಾಗಿದೆ ಎಂದು ಅವರು  ಪ್ರಶ್ನಿಸಿದರು.

0 Shares

Facebook Comments

comments