LATEST NEWS
ಶಾಸಕ ಅಭಯಚಂದ್ರ ಜೈನ್ ಗೆಲುವಿಗೆ ಪೂರ್ಣ ಪ್ರಮಾಣದಲ್ಲಿ ದುಡಿಯುತ್ತೇನೆ : ಐವನ್ ಡಿಸೋಜಾ
ಶಾಸಕ ಅಭಯಚಂದ್ರ ಜೈನ್ ಗೆಲುವಿಗೆ ಪೂರ್ಣ ಪ್ರಮಾಣದಲ್ಲಿ ದುಡಿಯುತ್ತೇನೆ : ಐವನ್ ಡಿಸೋಜಾ
ಮಂಗಳೂರು ಏಪ್ರಿಲ್ 16 : ಶಾಸಕ ಅಭಯಚಂದ್ರ ಜೈನಿಗೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಪೂರ್ಣ ಪ್ರಮಾಣದಲ್ಲಿ ಶ್ರಮಿಸುತ್ತೇನೆ.
ಮುಲ್ಕಿ- ಮೂಡಬಿದ್ರೆ ಕ್ಷೇತ್ರದಿಂದ ಶಾಸಕ ಅಭಯಚಂದ್ರ ಜೈನ್ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ನನಗೆ ಟಿಕೆಟ್ ಕೈ ತಪ್ಪಿದೆ ಎಂದು ವಿಧಾನ ಪರಿಷತ್ ನ ಮುಖ್ಯ ಸಚೇತಕ ಐವನ್ ಡಿಸೋಜಾ ಹೇಳಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ ಅವರು ಈ ಹಿಂದೆ ಶಾಸಕ ಅಭಯಚಂದ್ರ ಜೈನ್ ಚುನಾವಣೆಯಲ್ಲಿ ಸ್ವರ್ಧಿಸುವುದಿಲ್ಲ ಎಂದು ಹೇಳಿದ್ದರು.
ಯುವಕರಿಗೆ ಅವಕಾಶ ಕೊಟ್ಟಲ್ಲಿ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ ಎಂದು ಹೇಳಿದ್ದರಿಂದ ನಾನು ಹಾಗು ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಟಿಕೆಟ್ ಗಾಗಿ ಅರ್ಜಿ ಹಾಕಿದ್ದೆವು.
ಇದು ಸತ್ಯ.
ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಅಭಯಚಂದ್ರ ಜೈನ್ ಅವರಿಗೆ ಟಿಕೆಟ್ ಬೇಡ ಅಂದ್ರೆ ನನಗೆ ಟಿಕೆಟ್ ನೀಡುವ ಭರವಸೆ ಕೂಡ ನೀಡಿದ್ದಾದರು.
ಆದರೆ ಈಗ ಅಭಯಚಂದ್ರ ಜೈನ್ ಗೆ ಟಿಕೆಟ್ ನೀಡಿದ್ದಾರೆ. ಇದರಿಂದ ನನಗೆ ಬೇಸರ ಇಲ್ಲ. ಟಿಕೆಟ್ ಪಡೆದು ಚುನಾವಣೆಗೆ ಸ್ಪರ್ಧಿಸುತ್ತಿರುವ ಆಭಯಚಂದ್ರ ಜೈನ್ ಅವರಿಗೆ ಶುಭ ಹಾರೈಸುತ್ತೆನೆ ಎಂದರು.
ಈ ಚುನಾವಣೆ ಸತ್ಯ ಮತ್ತು ಅಸತ್ಯ, ಸರ್ವಾಧಿಕಾರ ಮತ್ತು ಪ್ರಜಾಪ್ರಭುತ್ವದ ನಡುವೆ ನಡೆಯುವ ಚುನಾವಣೆಯಾಗಿದೆ.
ಈ ಚುನಾವಣೆ ಸುಲಭದಲ್ಲಿ ಗೆಲ್ಲಬಹುದಾದ ಚುನಾವಣೆಯಲ್ಲ ಆದ್ದರಿಂದ ಚುನಾವಣೆಯನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ 8 ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದ ಅವರು ರಾಜ್ಯದಲ್ಲಿ ಕನಿಷ್ಟ 140 ಸೀಟುಗಳನ್ನು ಪಡೆದು ಕಾಂಗ್ರೆಸ್ ಮತ್ತೆ ಆಧಿಕಾರಕ್ಕೆ ಬರಲಿದೆ.
ಸಿದ್ದರಾಮಯ್ಯ ಅವರೇ ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಅವರು ಭವಿಷ್ಯ ನುಡಿದರು.
You must be logged in to post a comment Login