ಉಡುಪಿ,ಆಗಸ್ಟ್ 24:ಶ್ರೀಲಂಕಾ ದೇಶದ ಪ್ರಧಾನಿ ರಾನಿಲ್ ವಿಕ್ರಮ ಸಿಂಗೆ ಮೂರು ದಿನಗಳ ಭೇಟಿಗೆ ರಾಜ್ಯಕ್ಕೆ ಆಗಮಿಸಲಿದ್ದಾರೆ.

ಈ ಸಂದರ್ಭದಲ್ಲಿ ಉಡುಪಿ ಕೊಲ್ಲೂರಿಗೆ ಭೇಟಿ ನೀಡಿ ಮೂಕಾಂಬಿಕಾ ದೇವಿಯ ದರ್ಶನ ಪಡೆಯಲಿದ್ದಾರೆ. ಅಗಸ್ಟ್ 25 ರಂದು ಬೆಂಗಳೂರಿಗೆ ಆಗಮಿಸಲಿರುವ ಅವರು ಅಂದು ಬೆಂಗಳೂರಿನಲ್ಲೇ ತಂಗಲಿದ್ದಾರೆ. ನಾಳೆ ಶ್ರೀಲಂಕಾ ರಾಜಧಾನಿ ಕೊಲೊಂಬೋ ದಿಂದ 6.50 ರ  ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಲಿರುವ ಅವರು ರಾತ್ರಿ 8.10 ಕ್ಕೆ ಬೆಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಶ್ರೀಲಂಕಾದ ಡೆಪ್ಯುಟಿ ಹೈಕಮಿಷನರ್ ವಿ. ಕೃಷ್ಣಮೂರ್ತಿ ಪ್ರಧಾನಿ ರಾನಿಲ್ ವಿಕ್ರಮಸಿಂಗೆಯನ್ನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಳ್ಳಲಿದ್ದಾರೆ. ಅಂದು ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ತಂಗಲಿದ್ದಾರೆ. ಅಗಸ್ಟ್ 26 ಶನಿವಾರ ಬೆಂಗಳೂರು ವಿಮಾನ ನಿಲ್ದಾಣದಿಂದ 9 ಗಂಟೆಗೆ ವಿಶೇಷ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಆಗಮಿಸಲಿರುವ ಅವರು ಬಳಿಕ ಕಾರಿನ ಮೂಲಕ ಕೊಲ್ಲೂರು ಕ್ಷೇತ್ರಕ್ಕೆ ತಲುಪಲಿದ್ದಾರೆ. ಬೆಳಿಗ್ಗೆ 11.15 ರಿಂದ 1 ಗಂಟೆಯವರೆಗೆ ದೇವಸ್ಥಾನದಲ್ಲಿ ದೇವಿ ಮೂಕಾಂಬಿಕೆಗೆ ವಿಶೇಷ ಪೂಜೆ ನೆರವೇರಿಸಲಿರುವ ಶ್ರೀಲಂಕಾ ಪ್ರಧಾನಿಗಳು ಮಧ್ಯಾಹ್ನ 1.30 ಕ್ಕೆ ಮತ್ತೆ ಬೆಂಗಳೂರಿಗೆ ಹೊರಡಲಿದ್ದಾರೆ ಎಂದು ಶ್ರೀಲಂಕಾ ಪ್ರಧಾನಿ ಸಚಿವಾಲಯ ಮಾಹಿತಿ ನೀಡಿದೆ.

0 Shares

Facebook Comments

comments