Connect with us

MANGALORE

ಸಿದ್ದರಾಮಯ್ಯ ರಾಜ್ಯದ ಕೊನೆಯ ಕಾಂಗ್ರೆಸ್ ಮುಖ್ಯಮಂತ್ರಿ – ಕೆ.ಎಸ್ ಈಶ್ವರಪ್ಪ

ಸಿದ್ದರಾಮಯ್ಯ ರಾಜ್ಯದ ಕೊನೆಯ ಕಾಂಗ್ರೆಸ್ ಮುಖ್ಯಮಂತ್ರಿ – ಕೆ.ಎಸ್ ಈಶ್ವರಪ್ಪ

ಮಂಗಳೂರು ನವೆಂಬರ್ 11 : ಬಿಜೆಪಿಯ ನವಕರ್ನಾಟಕ ಪರಿವರ್ತನಾ ಯಾತ್ರೆ ಮಂಗಳೂರು ತಲುಪಿದೆ. ಮಂಗಳೂರಿನ ನೆಹರೂ ಮೈದಾನದಲ್ಲಿ ಪರಿವರ್ತನಾ ಯಾತ್ರೆಯ ಸಭಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಸುಮಾರು 5 ಸಾವಿರಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ಸಿ.ಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ಮುಂದುವರೆಸಿದ್ದಾರೆ. ಸಿದ್ದರಾಮಯ್ಯ ಅವರ ತಲೆಯಲ್ಲಿ ಮೆದಳು ಇದೆಯೋ ಅಥವಾ ಸೆಗಣಿ ಇದೆಯೋ ಗೊತ್ತಿಲ್ಲ ಎಂದ ಅವರು ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿ ಆಗಿರೋದು ರಾಜ್ಯದ ದುರಾದೃಷ್ಠ ಎಂದು ಹೇಳಿದರು.

ಸಿದ್ದರಾಮಯ್ಯ ರಾಜ್ಯ ದ ಕೊನೆಯ ಕಾಂಗ್ರೆಸ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದ ಅವರು ಮೂರು ತಿಂಗಳ ಒಳಗೆ ಸರಕಾರದ ಇಬ್ಬರು ಸಚಿವರು ಜೈಲಿಗೆ ಹೊಗಲಿದ್ದಾರೆ ಎಂದರು. ಸಚಿವರಾದ ಕೆ ಜೆ ಜಾರ್ಜ್ ಮತ್ತು ಡಿ ಕೆ ಶಿವಕುಮಾರ್ ಜೈಲಿಗೆ ಹೋಗಲಿದ್ದಾರೆ ಎಂದು ಭವಿಷ್ಯ ನುಡಿದರು.

Facebook Comments

comments