ಶಿವಳ್ಳಿ ಸಭಾ ಮಂಗಳೂರು ಸಂಘದ ವತಿಯಿಂದ ಇಲ್ಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ದಲ್ಲಿ ನ. 23ರಂದು ಸಾಮೂಹಿಕ ಚಂಡಿಕಾಯಾಗವು ಶ್ರದ್ಧಾಭಕ್ತಿ ಹಾಗೂ ವೈಭವದಿಂದ ಸಂಪನ್ನಗೊಂಡಿತು.

ಸುರತ್ಕಲ್ : ಶಿವಳ್ಳಿ ಸಭಾ ಮಂಗಳೂರು ಸಂಘದ ವತಿಯಿಂದ ಇಲ್ಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ದಲ್ಲಿ ನ. 23ರಂದು ಸಾಮೂಹಿಕ ಚಂಡಿಕಾಯಾಗವು ಶ್ರದ್ಧಾಭಕ್ತಿ ಹಾಗೂ ವೈಭವದಿಂದ ಸಂಪನ್ನಗೊಂಡಿತು.

ಧಾರ್ಮಿಕ ವಿಧಿವಿಧಾನಗಳು: ಸುದರ್ಶನ ಬನ್ನಿಂತಾಯ ಅವರು ದೇವಿಯ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ನೆರವೇರಿಸಿದರು. ಚೆನ್ನೈನ ತಲಪಾಡಿ ವಿಷ್ಣುಮೂರ್ತಿ ಭಟ್ ಅವರ ಪೌರೋಹಿತ್ಯದಲ್ಲಿ ದೇವಸ್ಥಾನದ ಹೊರಾವರಣದಲ್ಲಿರುವ ಯಾಗ ಶಾಲೆಯಲ್ಲಿ ಚಂಡಿಕಾ ಯಾಗ, ಸಂಘದ ವಿವಿಧ ವಲಯಗಳ ಸದಸ್ಯರಿಂದ ಭಜನಾ ಕಾರ್ಯಕ್ರಮ ಜರಗಿತು. ಸಾಮೂಹಿಕ ಶ್ರೀ ಲಲಿತಾ ಸಹಸ್ರನಾಮ ಪಾರಾಯಣ,ಮಧ್ಯಾಹ್ನ ಸುಮಾರು 12 ಗಂಟೆಗೆ ಮಹಾಪೂಜೆ ಹಾಗೂ ಯಾಗದ ಪೂರ್ಣಾಹುತಿ, ಅನ್ನಸಂತರ್ಪಣೆ ನೆರವೇರಿತು. ಈ ಸಂದರ್ಭದಲ್ಲಿ ಶಿವಳ್ಳಿ ಸಭಾ ಪದಾಧಿಕಾರಿಗಳ ಜೊತೆಯಲ್ಲಿ ಶಾರದಾ ಸಮೂಹ ವಿದ್ಯಾಸಂಸ್ಥೆಗಳ ಸ್ಥಾಪಕರು ಹಾಗೂ ವಿಹಿಂಪ ಮುಖಂಡರಾದ ಎಂ.ಬಿ. ಪುರಾಣಿಕ್, ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷರು ಹಾಗೂ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಧಾರ್ಮಿಕ ಪರಿಷತ್ ಸದಸ್ಯ ಸುಬ್ರಹ್ಮಣ್ಯ ಕೊರಿಯರ್, ದೇರೆಬೈಲ್ ರಮೇಶ್ ತಂತ್ರಿ, ವಕೀಲರಾದ ಚಿದಾನಂದ ಕೆದಿಲಾಯ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Share Information