ಉಡುಪಿ ಅಗಸ್ಟ್ 15: ಸ್ವಾತಂತ್ರ್ಯೋತ್ಸವ ಆಚರಣೆ ವೇಳೆ ಕಾಲೇಜು ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರ ತಾಲೂಕಿನ ಹಟ್ಟಿ ಕುದ್ರು ನಿವಾಸಿ ಅಮಿತ್ ಪೂಜಾರಿ ಮೃತಪಟ್ಟ ವಿದ್ಯಾರ್ಥಿ.

ಇಲ್ಲಿಯ ಬಿ.ಜೆ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಅಮಿತ್ ಪೂಜಾರಿ, ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮ ಸಂದರ್ಭದಲ್ಲಿ ಅಮಿತ್ ಪೂಜಾರಿ ಏಕಾಏಕಿ ಕುಸಿದು ಬಿದ್ದಿದ್ದಾರೆ.

ಈ ಹಿನ್ನೆಲೆ ಅಮಿತ್ ಪೂಜಾರಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ ಸಾವಿಗೆ ಕಾರಣ ಹೃದಯಾಘಾತ ಎಂದು ವೈದ್ಯರು ತಿಳಿಸಿದ್ದಾರೆ.

0 Shares

Facebook Comments

comments