DAKSHINA KANNADA
ಹಬ್ಬಕ್ಕೆ ಅಕ್ರಮ ಪ್ರಾಣಿ ಸಾಗಣಿಕೆ ವಧೆಗೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ
ಮಂಗಳೂರು ಆಗಸ್ಟ್31: ಬಕ್ರೀದ್ ಹಬ್ಬ ಆಚರಿಸುವ ಸಂದರ್ಭದಲ್ಲಿ ಅಕ್ರಮವಾಗಿ ಒಂಟೆ/ಗೋವುಗಳ ಹತ್ಯೆ ಹಾಗೂ ಅನಧಿಕೃತ ಸಾಗಾಣಿಕೆಯನ್ನು ತಡೆಗಟ್ಟುವ ಕೆಲವು ಸೂಚನೆಗಳನ್ನು ನೀಡಲಾಗಿದೆ. ಯಾವುದೇ ಕಾರಣಕ್ಕೂ ಯಾರೇ ಆಗಲಿ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿ ಪ್ರಾಣಿಗಳನ್ನು ಸಾಗಾಣಿಕೆ/ ಬಲಿ/ ವಧೆ ಮಾಡುವಂತಿಲ್ಲ. ಕಾನೂನನ್ನು ಉಲ್ಲಂಘಿಸಿ ಅಕ್ರಮವಾಗಿ ಅಥವಾ ಅನಧಿಕೃತವಾಗಿ ಪ್ರಾಣಿಗಳನ್ನು ಸಾಕಾಣಿಕೆ ಮಾಡುತ್ತಿದ್ದಲ್ಲಿ ಸಾರ್ವಜನಿಕರು ತಾವೇ ಕಾನೂನನ್ನು ಕೈಗೆತ್ತಿಕೊಳ್ಳುವಂತಿಲ್ಲ. ಈ ಬಗ್ಗೆ ಸಂಬಂಧಿಸಿದ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಒಂದು ವೇಳೆ ಸಾರ್ವಜನಿಕರು ತಾವೇ ಕಾನೂನನ್ನು ಕೈಗೆತ್ತಿಕೊಂಡಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪ್ರಮುಖ ಪ್ರಾರ್ಥನಾ ಸ್ಥಳಗಳಲ್ಲಿ ಸೂಕ್ತ ಬ್ಯಾರಿಕೇಡ್ ವ್ಯವಸ್ಥೆಗಳನ್ನು ನಗರ ಸ್ಥಳೀಯ ಸಂಸ್ಥೆಗಳ ಮೂಲಕ ಪೊಲೀಸ್ ಅಧಿಕಾರಿಗಳು ಸೂಕ್ತ ಬಂದೋಬಸ್ತ್, ವಾಹನಗಳ ಸುಗಮ ಸಂಚಾರಕ್ಕೆ ಮತ್ತು ವಾಹನಗಳ ನಿಲುಗಡೆಗಾಗಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು. ಆಯಾ ತಾಲ್ಲೂಕಿನ ತಹಶೀಲ್ದಾರರು ಅಗತ್ಯವಿದ್ದಲ್ಲಿ ಶಾಂತಿ ಸಭೆಯನ್ನು ನಡೆಸಿ, ಹಬ್ಬವನ್ನು ಶಾಂತಿಯುತವಾಗಿ ಮತ್ತು ಸೌಹಾರ್ದಯುತವಾಗಿ ಆಚರಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್ ಸೂಚನೆ ನೀಡಿದ್ದಾರೆ.
You must be logged in to post a comment Login