ಮಂಗಳೂರು,ಅಗಸ್ಟ್ 15: ರಾಷ್ಟ್ರಧ್ವಜವನ್ನು ತಲೆ ಕೆಳಗಾಗಿ ಹಾರಿಸಿದ ಘಟನೆ ಮಂಗಳೂರು ಹೊರವಲಯದ ಹಳೆಯಂಗಡಿಯಲ್ಲಿ ನಡೆದಿದೆ. ಹಳೆಯಂಗಡಿಯ ರಿಕ್ಷಾ ಪಾರ್ಕೊಂದರಲ್ಲಿ ಧ್ವಜವನ್ನು ತಲೆಕೆಳಗಾಗಿ ಹಾರಿಸಿದ್ದು, ಘಟನಾ ಸ್ಥಳಕ್ಕೆ ಹಿರಿಯ ಪೋಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಷ್ಟ್ರ ಧ್ವಜಕ್ಕೆ ತಿಳಿದೋ, ತಿಳಿದೆಯೋ ಅವಮಾನ ಮಾಡುವುದು ಕಾನೂನು ಪ್ರಕಾರ ಅಪರಾಧವಾಗಿದ್ದು, ಈ ನಿಟ್ಟಿನಲ್ಲಿ ಧ್ವಜ ಹಾರಿಸಿದವರ ವಿರುದ್ಧ ಶಿಕ್ಷೆಯಾಗುವ ಎಲ್ಲಾ ಸಾಧ್ಯತೆಗಳಿವೆ.

Facebook Comments

comments