ಸುಳ್ಯ, ಜುಲೈ 18: ಹಿರಿಯ ಪತ್ರಕರ್ತ ಹಾಗೂ ಬಿಸಿನೆಸ್ ಲೈನ್ ನ ಮಂಗಳೂರು ವಿಭಾಗದ ಸಹಾಯಕ ಸಂಪಾದಕರಾದ ವಿನಾಯಕ್ .ಎ.ಜೆ ಯವರನ್ನು ಸುಳ್ಯ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸುಳ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಪತ್ರಿಕಾ ದಿನಾಚಾರಣೆ, ಸನ್ಮಾನ ಮತ್ತು ಉಪನ್ಯಾಸ ಕಾರ್ಯಕ್ರಮದಲ್ಲಿ ವಿನಾಯಕ್ ಅವರನ್ನು ಸನ್ಮಾನಿಸಲಾಯಿತು. ದಕ್ಷಿಣಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಇಂದಾಜೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಜಾವಾಣಿ ಪತ್ರಿಕೆಯ ಹಿರಿಯ ವರದಿಗಾರ್ತಿ ರಾಜಲಕ್ಷ್ಮೀ ಕೋಡಿಬೆಟ್ಟು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು. ಸಂಘದ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಘದ ಸದಸ್ಯರು ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

0 Shares

Facebook Comments

comments