LATEST NEWS
ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ
ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ
ಪುತ್ತೂರು ಜುಲೈ 30: ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ನಡೆದಿದೆ. ಕೆಮ್ಮತ ಕೂಟೇಲು ಎಂಬಲ್ಲಿರುವ ಗುಂಡ್ಯ ಹೊಳೆಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ತೇಲಾಡಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಈ ಮಹಿಳೆ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಸ್ಥಳೀಯ ವ್ಯಕ್ತಿಯೋರ್ವರು ಮೃತದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತ ಮಹಿಳೆಯು ಕಪ್ಪು ಬಣ್ಣದ ಚೂಡಿದಾರ್ ಟಾಪ್ ಹಾಗೂ ಕೆಂಪು ಬಣ್ಣದ ಪ್ಯಾಂಟ್ ಧರಿಸಿದ್ದಾರೆ. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
You must be logged in to post a comment Login