Connect with us

UDUPI

ಎನ್.ಎಸ್.ಎಸ್ ವಿದ್ಯಾರ್ಥಿಗಳು ನಾಯಕತ್ವ ಗುಣ ರೂಪಿಸಿಕೊಳ್ಳಿ-ಪೂಜಾರ್

ಉಡುಪಿ, ಆಗಸ್ಟ್ 21 : ಎನ್.ಎಸ್.ಎಸ್ ವಿದ್ಯಾರ್ಥಿಗಳು ಶಿಸ್ತು ಮತ್ತು ನಾಯಕತ್ವ ಗುಣಗಳನ್ನು ಬೆಳಸಿಕೊಳ್ಳುವಂತೆ ಎನ್‍ಎಸ್‍ಎಸ್ ನ ಕೇಂದ್ರ ಪ್ರಾದೇಶಿಕ ನಿರ್ದೇಶಕ ಪೂಜಾರ್ ತಿಳಿಸಿದ್ದಾರೆ.
ಅವರು ಮಂಗಳವಾರ, ಜಿಲ್ಲಾಡಳಿತ ಉಡುಪಿ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಡಾ. ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಲಯನ್ಸ್ ಕ್ಲಬ್ ಪರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಪುರಭವನದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ರಾಷ್ಟ್ರೀಯ ಸೇವಾ ಯೋಜನೋತ್ಸವ ಕಾರ್ಯಕ್ರಮದ ಸಮರೋಪ ಸಮಾರಂಭದಲ್ಲಿ ಮಾತನಾಡಿದರು.
ಎನ್‍ಎಸ್‍ಎಸ್ ನಲ್ಲಿ ಶಿಸ್ತಿಗೆ ಪ್ರಾಮುಖ್ಯತೆ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಸೇವಾ ಮನೋಭಾವ ಮತ್ತು ಶಿಸ್ತಿನಿಂದ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು, ದೇಶದ ಸಂಸ್ಕøತಿಯನ್ನು ಬೆಳೆಸಿ ಸಾಂಸ್ಕøತಿಕ ರಾಯಭಾರಿಗಳಾಗಬೇಕು, ನಿರ್ದಿಷ್ಟ ಗುರಿ ಹೊಂದಿದ್ದು, ರಾಷ್ಟ್ರದ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಪೂಜಾರ್ ತಿಳಿಸಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ ಮಾತನಾಡಿ, ಯಾವುದೇ ಪ್ರತಿಫಲ ಇಲ್ಲದೆ ಮಾಡುವ ಸೇವೆ ಅತ್ಯುತ್ತಮವಾದುದು, ವಿದ್ಯಾರ್ಥಿಗಳು ರಾಷ್ಟ್ರದ ಮೌಲ್ಯಗಳನ್ನು ಕಾಪಾಡಬೇಕು ಎಂದು ಹೇಳಿದರು.
ಉಡುಪಿಯಲ್ಲಿ ಆಗಸ್ಟ್ 18 ರಿಂದ 22 ರ ವರಗೆ 5 ದಿನಗಳ ಕಾಲ ನಡೆದ ಈ ರಾಜ್ಯಮಟ್ಟದ ರಾಷ್ಟ್ರೀಯ ಸೇವಾ ಯೋಜನೋತ್ಸವದಲ್ಲಿ , ರಾಜ್ಯದ 20 ವಿಶ್ವ ವಿದ್ಯಾಲಯಗಳ ಸುಮಾರು 300 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು, ಮಂಗಳೂರು ವಿಶ್ವ ವಿದ್ಯಾಲಯ ಸಮಗ್ರ ಪ್ರಶಸ್ತಿಯನ್ನು ಪಡೆಯಿತು.
ಕಾರ್ಯಕ್ರಮದಲ್ಲಿ ರಾಜ್ಯ ಎನ್.ಎಸ್.ಎಸ್ ಅಧಿಕಾರಿ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಕೋಶದ ಪದನಿಮಿತ್ತ ಸರಕಾರದ ಜಂಟಿ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ , ಡಾ. ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಜಗದೀಶ್ ರಾವ್, ಪ್ರಾಧ್ಯಾಪಕ ಪ್ರೊ. ಪ್ರಕಾಶ್ ಕ್ರಮಧಾರಿ, ಜಯಲಕ್ಷ್ಮಿ, ಲಯನ್ಸ್ ಕ್ಲಬ್ ಪರ್ಕಳದ ಅಧ್ಯಕ್ಷ ಹರೀಶ್ ಉಪಸ್ಥಿತರಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *