LATEST NEWS
ಕಥುವಾ ಬಾಲಕಿಯ ಮೇಲಿನ ಪೈಶಾಚಿಕ ಕೃತ್ಯಕ್ಕೆ ಖಂಡನೆ : ಕರಾವಳಿ ಜನತೆ ಬೆಳಗಿಸಿತು ಸಾವಿರ ಹಣತೆ

ಕಥುವಾ ಬಾಲಕಿಯ ಮೇಲಿನ ಪೈಶಾಚಿಕ ಕೃತ್ಯಕ್ಕೆ ಖಂಡನೆ : ಕರಾವಳಿ ಜನತೆ ಬೆಳಗಿಸಿತು ಸಾವಿರ ಹಣತೆ
ಮಂಗಳೂರು, ಏಪ್ರಿಲ್ 16 : ಜಮ್ಮು ಕಾಶ್ಮೀರದ ಕಥುವಾದಲ್ಲಿ ನಡೆದ ಬಾಲಕಿಯ ಸಾಮೂಹಿಕ ಆತ್ಯಾಚಾರ , ಕೊಲೆ ಹಾಗು ಉತ್ತರ ಪ್ರದೇಶದ ಉನ್ನಾವ್ ನಲ್ಲಿ ಯುವತಿ ಮೇಲಿನ ಅತ್ಯಾಚಾರ ಪ್ರಕರಣದ ವಿರುದ್ಧ ದೇಶದೆಲ್ಲೆಡೆ ಆಕ್ರೋಶ ಭಗಿಲೆದ್ದಿದೆ.
ದೇಶದ ಬಹುತೇಕ ಎಲ್ಲಾ ರಾಜ್ಯ ಗಳಲ್ಲಿ ಈ ಬರ್ಬರ ಕೃತ್ಯದ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದು ಅಂತರಾಷ್ಟ್ರೀಯ ಮಟ್ಟದಲ್ಲೂ ಕಥುವಾ ಹಾಗು ಉನ್ನಾವ್ ಘಟನೆ ಗಮನ ಸೆಳೆದಿದೆ.

ಈ ಘಟನೆ ಖಂಡಿಸಿ ಬಾಲಿವುಡ್ ತಾರೆಯರು ಒಂದೆಡೆ ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ ಇನ್ನೊಂದೆಡೆ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜು ಹಾಕಲಾಗುತ್ತಿದೆ.
ಈ ಬರ್ಬರ ಘಟನೆ ಖಂಡಿಸಿ ಮಂಗಳೂರಿನಲ್ಲಿ ಕೂಡ ಕೆಲ ಸಮಾನ ಮನಸ್ಕ ಸಂಘಟನೆಗಳು ಬೀದಿಗಿಳಿದಿವೆ.
ಇಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಸಾವಿರಾರು ಕಾರ್ಯಕರ್ತರು ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿ, ಹೇಯ ಕೃತ್ಯವನ್ನು ಒಕ್ಕೊರಲಿನಿಂದ ಖಂಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿವಿದ ಸಂಘಟನೆಗಳ ಮುಖಂಡರು ಕೇಂದ್ರ ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ದೇಶದಲ್ಲಿ ಮಹಿಳೆರಿಗೆ ಭದ್ರತೆ ಇಲ್ಲ.
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶದ ಮಾನ ಹರಾಜಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅತ್ಯಾಚಾರ ಪ್ರಕರಣಗಳಿಗೆ ಕಡಿವಾಣ ಹಾಕದಿದ್ದರೆ ಮುಂಬರುವ ದಿನಗಳಲ್ಲಿ ಗಂಡು ಮಕ್ಕಳನ್ನು ಹಡೆಯಲು ಜನರು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗ ಬಹುದು.
ಕಾರಣ ಆ ಮಗು ಮುಂದೆ ದೊಡ್ಡದಾಗಿ ಯಾವುದೂ ಮುಗ್ದ ಹೆಣ್ಣು ಮಗುವನ್ನು, ಅಥವಾ ಮಹಿಳೆಯನ್ನು ಅತ್ಯಾಚಾರ ಮಾಡಬಹುದು ಎಂದು ಮಾರ್ಮಿಕವಾಗಿ ನುಡಿದರು.
ಸಾವಿರಾರು ಸಂಖ್ಯೆಯಲ್ಲಿ ಜಾತಿ, ಧರ್ಮ, ಮೇಲು ಕೀಳು ಎಂಬ ಭಾವನೆಗಳನ್ನು ಬದಿಗೊತ್ತಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ವಿಡಿಯೋಗಾಗಿ…