Connect with us

DAKSHINA KANNADA

ಕಾವ್ಯಳ ನಿಗೂಢ ಸಾವು ಪ್ರಕರಣ ತನಿಖೆ ಸೆಪ್ಟೆಂಬರ್ 10 ಗಡುವು, ತಪ್ಪಿದ್ದಲ್ಲಿ ಜಿಲ್ಲಾ ಬಂದ್ ನ ಎಚ್ಚರಿಕೆ.

ಮಂಗಳೂರು ಅಗಸ್ಟ್ 9 : ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ನಿಗೂಢ ಸಾವು ಪ್ರಕರಣ ಜಸ್ಟಿಸ್ ಫಾರ್ ಕಾವ್ಯ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ.ವಿಧ್ಯಾರ್ಥಿನಿ ಕಾವ್ಯ ಪ್ರಕರಣ ಪಾರದರ್ಶಕ ತನಿಖೆ ಆಗಬೇಕು ಮತ್ತು ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು.ಜಸ್ಟಿಸ್ ಫಾರ್ ಕಾವ್ಯ ಹೋರಾಟ ಸಮಿತಿ ಆಶ್ರಯದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಬೃಹತ್ ಪ್ರತಿಭಟನೆಯಲ್ಲಿ ಸಾವಿರಾರು ವಿಧ್ಯಾರ್ಥಿಗಳು ವಿವಿಧ ಕಾಲೇಜುಗಳಿಂದ ಆಗಮಿಸಿದ್ದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ವಿವಿಧ ಸಂಘಟನೆಗಳ ಮುಖಂಡರು, ರಾಜ್ಯಾದ್ಯಂತ ಕಾವ್ಯಾಳಿಗೆ ನ್ಯಾಯ ಸಿಗಲು ಪ್ರತಿಭಟನೆಗಳು ನಡೆಯುತ್ತಿದೆ. ಆದರೆ ಒಂದು ವರ್ಗದ ಜನ ಈ ಹೋರಾಟವನ್ನು ಹತ್ತಿಕ್ಕಲು ವ್ಯವಸ್ಥಿತ ಸಂಚನ್ನು ನಡೆಸುತ್ತಿದೆ. ಜಾತಿ ಧರ್ಮದ ಹೆಸರಿನಲ್ಲಿ ಹೋರಾಟಗಾರರ ನಡುವೆ ಬಿರುಕು ಸೃಷ್ಟಿ ಮಾಡಿ ಹೋರಾಟವನ್ನು ಹತ್ತಿಕ್ಕಲು ನೋಡುತ್ತಿದೆ. ರಾಜಕೀಯ ವ್ಯಕ್ತಿಗಳು ಇವರೊಂದಿಗೆ ಕೈ ಜೋಡಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯ ಬಂದ್ ಕರೆ ಎಚ್ಚರಿಕೆ.

ಹೆತ್ತ ಕರುಳಿನ ನೋವು ತನ್ನ ಮಕ್ಕಳನ್ನು ಕಳೆದುಕೊಂಡಾಗ ಆಗುವ ಅದೇ ನೋವು ನಾಳೆ ಸಮಾಜದ ಯಾವುದೇ ವರ್ಗ ಜನರಿಗೆ ಅವರ ಮನೆಯವರಿಗೂ ಆಗಬಹುದು, ಆದ್ದರಿಂದ ಎಲ್ಲರೂ ಸಂಘಟಿತರಾಗಿ ಹೋರಾಟ ನಡೆಸಬೇಕೆಂದು ಕರೆ ನೀಡಿದರು. ಸೆಪ್ಟೆಂಬರ್ ಮೊದಲ ವಾರದೊಳಗೆ ಕಾವ್ಯ ಕುಟುಂಬಕ್ಕೆ 25 ಲಕ್ಷ ಪರಿಹಾರ ಹಾಗೂ ಕಾವ್ಯ ಆತ್ಮಹತ್ಯೆ ಪ್ರಕರಣದ ತನಿಖೆ ವರದಿಯನ್ನು ಸಾರ್ವಜನಿಕರ ಮುಂದಿಡಬೇಕು. ಇದಕ್ಕೆ ತಪ್ಪಿದ್ದಲ್ಲಿ ಸೆಪ್ಟೆಂಬರ್ 10ರ ಒಳಗೆ ಜಿಲ್ಲೆಯ ಬಂದ್ ಕರೆ ನೀಡಲಾಗುವುದೆಂದು ಎಚ್ಚರಿಕೆ.

ಮಂಗಳೂರು ಮೇಯರ್ ಮಾತನಾಡಿ ಎಲ್ಲ ರಾಜಕೀಯ ಪಕ್ಷಗಳು ಸಂಘಟನೆಗಳು ತಮ್ಮ ಸ್ವಪ್ರತಿಷ್ಠೆಯನ್ನು ಹೊರಗಿಟ್ಟು ಕಾವ್ಯಳ ಕುಟುಂಬಕ್ಕೆ ನ್ಯಾಯ ಸಿಗುವ ತನಕ ಹೋರಾಟದಲ್ಲಿ ಭಾಗಿಯಾಗಬೇಕೆಂದು ಮನವಿ ಮಾಡಿದರು. ಹಾಗೂ ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ದೊರಕಿಸಿ ಕೊಡುವ ಪ್ರಯತ್ನ ಮಾಡಲಾಗುವುದೆಂದು ಘೋಷಿಸಿದರು.
ಕಾವ್ಯಳ ಹೆತ್ತವರು ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನೆಯಲ್ಲಿ ಸಿಪಿಐಎಂ, ಸಿಪಿಐ, ಕಾಂಗ್ರೇಸ್, ಜೆಡಿಎಸ್, ಬಿಜೆಪಿ, ಡಿಎಸ್ಎಸ್, ವಿವಿಧ ವಿಧ್ಯಾರ್ಧಿ ಸಂಘಟನೆ, ಶ್ರೀರಾಮ ಸೇನೆ, ಮುಸ್ಲಿಂ ಸಂಘಟನೆಗಳ ಒಕ್ಕೂಟ ಸೇರಿದಂತೆ ಅನೇಕ ಸಂಘಟನೆಗಳ ಮುಖಂಡರುಗಳು ಭಾಗವಹಿಸಿದ್ದರು.

5 ಸಾವಿರಕ್ಕೂ ಅಧಿಕ ವಿಧ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಭಾಗವಹಿಸಿದ್ದರಿಂದ ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಎರ್ಪಡಿಸಿದ್ದರು.

ವಿಡಿಯೋಗಾಗಿ ಈ ಕೆಳಗಿನ ಲಿಂಕನ್ನು ಒತ್ತಿರಿ..

Share Information
Continue Reading
Advertisement
Click to comment

Leave a Reply

Your email address will not be published. Required fields are marked *