UDUPI
ತೆಂಕನಿಡಿಯೂರು: ವಿಶೇಷ ವಾರ್ಷಿಕ ಶಿಬಿರ ಉದ್ಘಾಟಿಸಿದ ಪ್ರಮೋದ್ ಮಧ್ವರಾಜ್
ತೆಂಕನಿಡಿಯೂರು: ವಿಶೇಷ ವಾರ್ಷಿಕ ಶಿಬಿರ ಉದ್ಘಾಟಿಸಿದ ಪ್ರಮೋದ್ ಮಧ್ವರಾಜ್
ಉಡುಪಿ, ನವೆಂಬರ್ 28: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇದರ ರಾಷ್ಟ್ರೀಯ ಸೇವಾ ಯೋಜನೆಯ 2017-18ನೆಯ ಸಾಲಿನ ವಿಶೇಷ ವಾರ್ಷಿಕ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಸರ್ಕಾರಿ ಸಂಯುಕ್ತ ಪ್ರೌಢಶಾಲೆ, ಶೆಟ್ಟಿಬೆಟ್ಟು ಇಲ್ಲಿ ನಡೆಯಿತು.
ಪ್ರಮೋದ್ ಮಧ್ವರಾಜ್, ಮೀನುಗಾರಿಕೆ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು, ನಂತರ ಮಾತನಾಡಿದ ಸಚಿವರು ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವವನ್ನು ತಿಳಿಸುತ್ತಾ, ಪದವಿಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೂ ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳನ್ನು ತಾವು ವಿಸ್ತರಿಸಿದ್ದೇವೆಂದು ತಿಳಿಸುತ್ತಾ, ಶಿಬಿರಾರ್ಥಿಗಳು ಸಕ್ರಿಯವಾಗಿ ಈ ಶಿಬಿರದಲ್ಲಿ ಭಾಗವಹಿಸುವ ಮೂಲಕ ತಮ್ಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕೆಂದು ಕರೆಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಬಾಲಕೃಷ್ಣ ಎಸ್. ಹೆಗ್ಡೆ ಅವರು ಶಿಬಿರಾರ್ಥಿಗಳು ಒಂದು ವಾರಗಳ ಕಾಲ ಶಿಬಿರದಲ್ಲಿ ಶಿಸ್ತಿನಿಂದ ಪಾಲ್ಗೊಳ್ಳುವುದರ ಮೂಲಕ ತಮ್ಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಕಾಲೇಜಿಗೆ ಮತ್ತು ಸಮಾಜಕ್ಕೆ ಕೀರ್ತಿ ತರಬೇಕೆಂದರು.