DAKSHINA KANNADA
ದ.ಕ. ಎಸ್.ಪಿ. ಲಕ್ಷ್ಮೀಪ್ರಸಾದ್ ವರ್ಗಾವಣೆ-ನೂತನ ಎಸ್.ಪಿ.ಯಾಗಿ ಸೋನವಾನೆ ರಿಷಿಕೇಶ ಭಗವಾನ್

ಮಂಗಳೂರು, ಎಪ್ರಿಲ್ 01: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಅವರನ್ನು ಗುರುವಾರ ವರ್ಗಾವಣೆ ಮಾಡಲಾಗಿದ್ದು, ಶಿವಮೊಗ್ಗ ಜಿಲ್ಲೆಯ ಎಸ್.ಪಿ.ಯಾಗಿ ನೇಮಕ ಮಾಡಲಾಗಿದೆ.ಯಾದಗೀರ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಸೋನವಾನೆ ರಿಷಿಕೇಶ ಭಗವಾನ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಎಸ್‌ಪಿಯಾಗಿ ನೇಮಕ ಮಾಡಲಾಗಿದೆ.
ಏಪ್ರಿಲ್ 1ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಈ ವರ್ಗಾವಣೆ ಆದೇಶವನ್ನು ಹೊರಡಿಸಿದ್ದಾರೆ. ಲಕ್ಷ್ಮೀಪ್ರಸಾದ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಶಿವಮೊಗ್ಗದ ಎಸ್.ಪಿ.ಯಾಗಿ ನೇಮಕಗೊಳ್ಳಲಾಗಿದೆ.
