DAKSHINA KANNADA
ದ.ಕ ಗಲಭೆಗೆ ಕಾಂಗ್ರೇಸ್ ಸರಕಾರ ನೇರ ಹೊಣೆ…. ಜೆಡಿಎಸ್ ಆರೋಪ.

ಮಂಗಳೂರು.ಜುಲೈ 14: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮು ಸಂಘರ್ಷಕ್ಕೆ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರವೇ ಹೊಣೆ.. ಜೆಡಿಎಸ್ ಆರೋಪ.ಕಳೆದ ಒಂದು ತಿಂಗಳಿನಿಂದೀಚೆಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮು ಸಂಘರ್ಷಕ್ಕೆ ಕಾಂಗ್ರೇಸ್ ಸರಕಾರವೇ ನೇರ ಹೊಣೆಯಾಗಿದ್ದು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ದ.ಕ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಹಮ್ಮದ್ ಕುಂಞಿ ಆರೋಪಿಸದ್ದಾರೆ. ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಶಾಂತಿ ನೆಲೆಸುವ ನಿಟ್ಟಿನಲ್ಲಿ ಜೆಡಿಎಸ್ ಪಕ್ಷ ಜುಲೈ 22 ರಂದು ಲೈಟ್ ಹೌಸ್ ಹಿಲ್ ರಸ್ತೆಯಿಂದ ಜಿಲ್ಲಾಧಿಕಾರಿ ಕಛೇರಿವರೆಗೆ ಶಾಂತಿಯ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದರು.