Connect with us

BELTHANGADI

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ

ಮಂಗಳೂರು ನವೆಂಬರ್ 14: ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವದ ಸಂಭ್ರಮ. ಮಂಜುನಾಥನಿಗೆ ಅತಿ ಪ್ರೀಯವಾದ ಲಕ್ಷದೀಪೋತ್ಸವಕ್ಕೆ ಚಾಲನೆ ದೊರೆತಿದ್ದು ಇನ್ನು ಐದು ದಿನಗಳ ಕಾಲ ಅದ್ದೂರಿ ದೀಪೋತ್ಸವ ನಡೆಯಲಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವರ್ಷಂಪ್ರತಿ ನಡೆಯುವ ಲಕ್ಷ ದೀಪೋತ್ಸವ ಈ ಬಾರಿಯೂ ಅದ್ದೂರಿಯಾಗಿ ಆರಂಭಗೊಂಡಿದೆ. ಈ ದೀಪೋತ್ಸವಕ್ಕೆ ಹಿಂದೆ ಮಂಜುನಾಥನ ಸನ್ನಿದಿಯ ಸುತ್ತಲೂ ಒಂದು ಲಕ್ಷ ಹಣತೆಗಳನ್ನು ಉರಿಸುತ್ತಿದ್ದರು.ಆದರೆ ಇತ್ತೀಚಿನ ದಿನಗಳಲ್ಲಿ ವಿದ್ಯುತ್ ದೀಪಗಳಿಂದಲೇ ದೇವಾಲಯವನ್ನು ಶೃಂಗರಿಸಲಾಗುತ್ತದೆ.

ಕಾರ್ತಿಕ ಮಾಸದಂದು ಈ ಲಕ್ಷ ದೀಪೋತ್ಸವ ನಡೆಯುತ್ತಿದ್ದು ಕ್ಷೇತ್ರದ ದೇವರಾದ ಮಂಜುನಾಥ ಸ್ವಾಮಿ ಈ ಸಂದರ್ಭದಲ್ಲಿ ಕ್ಷೇತ್ರದಿಂದ ಹೊರಗೆ ಸಂಚರಿಸುತ್ತಾರೆ ಎಂಬ ಪ್ರತೀತಿ. ವಿವಿಧ ಪ್ರದೇಶಗಳಿಗೆ ಮಂಜುನಾಥನ ಮೂರ್ತಿಯೊಂದಿಗೆ ಮೆರವಣಿಗೆ ಸಾಗಿ ಪ್ರಮುಖ ಐದು ಕಟ್ಟೆಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಹಿಂದೆ ದೇವರನ್ನು ನೋಡಲು ಕ್ಷೇತ್ರಕ್ಕೆ ಹೋಗಲಾಗದವರಿಗೆ ದೇವರೇ ಅವರವರ ಊರಿಗೆ ಬರುತ್ತಾನೆನ್ನುವ ನಂಬಿಕೆ ಇತ್ತು. ಅದು ಇಂದಿಗೂ ಮುಂದುವರೆದಿದೆ.
ದೀಪೋತ್ಸವದ ಪ್ರಯುಕ್ತ ಬೆಳ್ಳಿಯ ಬ್ರಹ್ಮರಥೋತ್ಸವವೂ ನಡೆಯಲಿದೆ. ದೇಶ ವಿದೇಶದಿಂದ ಆಗಮಿಸಿದ ಲಕ್ಷಾಂತರ ಮಂದಿ ಭಕ್ತರು ಈ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ. ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಈ ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ನಡೆಲಿದೆ. ಎಲ್ಲಾ ದಿನಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯುತ್ತದೆ. ಲಕ್ಷದೀಪೋತ್ಸವದ ಅಂಗವಾಗಿ ಸರ್ವಧರ್ಮ ಸಮ್ಮೇಳನ ಹಾಗೂ ಸಾಹಿತ್ಯ ಸಮ್ಮೇಳನವೂ ನಡೆಯಲಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *